ವಿಷಯಕ್ಕೆ ಹೋಗಿ

ನಾನು ನೀನಾಸಂ ಪದವೀಧರನಲ್ಲ...

ನೀನಾಸಂ ಪದವಿ ನನ್ನ ತಲೆಗೆ ಅನಗತ್ಯ ಭಾರ ಸ್ವಾಮೀ. ಅಷ್ಟು ಕಪ್ಪು ಸುಂದರಿಯರ ಭಾರವೇ ನನ್ನ ತಲೆಗೆ ಸಾಕಾಗಿ ಹೋಗಿದೆ. ಇನ್ನು ಇಷ್ಟು 'ವಜನ್' ಪದವಿ ಕಿರೀಟ ಬೇಡವೇ ಬೇಡ.
ಸುಮ್ಮನೇ ಖಾಸಗಿಯಾಗಿ ಡೈರಿಯ ಹಾಗೆ ಬೆಚ್ಚಗೆ ನನ್ನ ಜತೆಗೆ ಸದಾ ಇರಲಿ ಎಂದುಕೊಂಡು ಈ ಬ್ಲಾಗ್ ರೂಪಿಸಿದ್ದೇನಷ್ಟೇ. ಅವಧಿ ಬ್ಲಾಗ್ ನನ್ನ ಈ ಪುಟ್ಟ ಯತ್ನಕ್ಕೆ ಬೆನ್ನು ತಟ್ಟಿದ್ದು ಸಂತೋಷವೇ. ಆದರೆ, ನನ್ನ ಬಗ್ಗೆ ಬೆನ್ನುತಟ್ಟುವ ಸಾಲುಗಳ ಬರೆಯುತ್ತ ನೀನಾಸಂ ಪದವೀಧರ ಎನ್ನುವ ಒಂದು ತಪ್ಪು ಮಾಹಿತಿ ಕೂಡ ನುಸುಳಿಕೊಂಡಿದೆ. ಸ್ವಾಮೀ ನಾನೀ ನೀನಾಸಂ ಸುದ್ದಿಗೇ ಹೋದವನಲ್ಲ. ಅಲ್ಲಿ ಕಲಿತು ಬಂದವರ ಜತೆ 'ಬೇಜಾನ್' ಜಗಳ ಮಾಡಿದಿನಿ ಅಷ್ಟೇ.

ಕಾಮೆಂಟ್‌ಗಳು

Manjunath H N ಹೇಳಿದ್ದಾರೆ…
hi
Dil...
You r a done good article writing, & also this is for understanding (advise) people it's good mining in this article.

This Blog also GOOD plz writ some more like

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಷ್ಕ್‌ ಕೆ ಇಮ್ತೆಹಾನ್‌ ಔರ್‌ ಭೀ ಹೈ’.. ಇಮ್ರಾನ್‌ ಖಾನ್‌!

ಪಾಕಿಸ್ತಾನದ ಬಗ್ಗೆ ಮಾತನಾಡುವುದು ಮಹಾ ಪಾಪದ ಕೆಲಸವೇನಲ್ಲ. ಹಾಗೆ ಭಾವಿಸಬೇಕಿಲ್ಲ. ಅದು ಒಪ್ಪಿತವೊ ಇಲ್ಲವೋ, ಅದರ ಬಗ್ಗೆ ಅಲಕ್ಷ್ಯವೋ ನಿರ್ಲಕ್ಷ್ಯವೊ ಏನೇ ಆದರೂ ಅದು ಒಂದು ದೇಶ. ನೆರೆಯ ರಾಷ್ಟ್ರ. ‘ಪಡೋಸಿ...’ ಸಂಬಂಧದಲ್ಲಿ ನಮ್ಮದೇ ಕರುಳಬಳ್ಳಿ. ಭಾಷೆ, ಜನಜೀವನ ಶೈಲಿಯಲ್ಲಿ ಬದಲಾದರೂ ಮನುಷ್ಯ ಭಾವ, ಬದುಕುವ ಸಾಮಾನ್ಯ ಕಾಳಜಿ  ಒಂದೇ. ಹಾಗೆ ನೋಡಿದರೆ ಸಾಂಸ್ಕೃತಿಕವಾಗಿ ಎರಡೂ ದೇಶಗಳು ಅಭಿನ್ನ. ನಮ್ಮಲ್ಲಿರುವ ಹಾಗೆ ಅಲ್ಲಿಯೂ ಪ್ರಜಾಪ್ರಭುತ್ವ ಇದೆ. ಅಲ್ಲಿ ನಡೆಯುವುದು ಇಲ್ಲೂ ನಡೆಯುತ್ತದೆ. ಅಲ್ಲಿ ನಡೆಯಲೇಬಾರದ್ದು ಇಲ್ಲೂ ನಡೆಯಲೇಬಾರದು.  ತೀವ್ರವಾದ ನಮ್ಮಲ್ಲಿನದಕ್ಕಿಂತ ಅಲ್ಲಿ ತುಸು ಹೆಚ್ಚು ಸವಾರಿಗೆ ಹವಣಿಸಿದೆ. ಅಲ್ಲಿನ ಮಿಲಿಟರಿ ಅತಿರೇಕದ್ದು. ಅಕ್ಷಮ್ಯ. ಮತ್ತೆ ದೇಶ ಪುಟ್ಟದಾದಷ್ಟು ಅದಕ್ಕೆ ಭಯಗಳು ಜಾಸ್ತಿ. ಮಿಲಿಟರಿ ಕವಚದಲ್ಲಿ ಅದು ಸುರಕ್ಷಾ ಭಾವವನ್ನು ಕಲ್ಪಿಸಿಕೊಳ್ಳುತ್ತದೆ. ಅದೊಂದು ತರಹದ ಸಮಾಧಾನ. ಆದರೆ ಭ್ರಮೆಯಿಂದ ಕೂಡಿದ್ದು. ಭಯೋತ್ಪಾದನೆ ಕೂಡ ಒಂದರ್ಥದಲ್ಲಿ ಪುಕ್ಕಲುತನವೇ ಆಗುತ್ತದೆ. ಹಿಂಸಾ ಪ್ರವೃತ್ತಿಗೆ ಹೆದರಿಸುವುದೇ ಕೆಲಸ. ಹೆದರಿಸುವವರು ಶೂರರು, ಧೀರರು ಮತ್ತು ಜೀನಿಯಸ್‌ ಆಗಿರಲು ಹೇಗೆ ಸಾಧ್ಯ? ಮುಖ್ಯವಾಗಿ ಅಲ್ಲಿನ ವಿದ್ಯಮಾನಗಳನ್ನು ಗಮನಿಸುವುದಾದರೆ, ಮಿಲಿಟರಿ, ಮತಾಂಧರು, ಭಯೋತ್ಪಾದಕರು, ಭ್ರಷ್ಟರು ಇದೆಲ್ಲದರಿಂದ ಪಾಕಿ ತುಂಬ ರೋಸಿ ಹೋಗಿದ್ದಾನೆ. ಒಂದು ಸೂಕ್ತ ಪರ್ಯಾಯಕ್ಕಾಗಿ ಹಂಬಲಿಸಿದ್...

‘ಪಲ್ಲಟ’ ಒಂದು ಪ್ರಾಮಾಣಿಕ ಪ್ರಯತ್ನ

  (ಇನ್ನೂ ತೆರೆ ಕಾಣದ ‘ಪಲ್ಲಟ’ ಕನ್ನಡ ಸಿನಿಮಾದ ಪ್ರೀಮಿಯರ್‌ ಶೋ  ಬಗ್ಗೆ ) ಸಿನಿಮಾದ ಸೊಗಸೇ ಅಂಥದು. ಯಂತ್ರಗಳಿಂದ ಸೆರೆ ಹಿಡಿದ ಬದುಕು ತೆರೆಯ ಮೇಲೆ ಬಾಳುವಾಗ ಆ ಕ್ಷಣಕ್ಕೆ ಎಲ್ಲ ಹೊಸತೇ ಆಗಿ ಕಾಣಿಸುತ್ತದೆ. ಗತ ಬದುಕು ಹೊಸ ಬದುಕಿನಂತೆ ಹೊಳೆಯುತ್ತದೆ. ಪರದೆ ಮೇಲಿನ ಮೂರು ಗಂಟೆಯ ಬಾಳಲ್ಲಿ ಪ್ರೇಕ್ಷಕ ಅದರ ಅಸಲಿ ನೋವು, ನಲಿವುಗಳ ಬದುಕಿಗಿಳಿಯುತ್ತ ಮೆಲ್ಲಗೆ ಅದರ ಒಟ್ಟು ಹರವಿನಗುಂಟ ಸಾಗಬಹುದು. ಆ ಪುಟ್ಟ ಜರ್ನಿಯಲ್ಲಿ  ಅವನೊಳಗಿನ ಬದುಕಿಗೆ ಹೊಸ ಕಣ್ಣುಗಳು ಮೂಡಬಹುದು. ಅಂತಃಕರಣದ ಸೆಲೆಗಳು ಮತ್ತಷ್ಟು ಜಿನುಗಬಹುದು. ಸಿನಿಮಾದ ಸಾಧ್ಯತೆಗಳು, ಪರಿಣಾಮಗಳು ಹಲವು. ಸಿನಿಮಾಗೆ ಅದರ ಅಂತಃಸತ್ವ ಮುಖ್ಯ. ನೋಡಿ ತಿಳಿವ ಪ್ರಾಸೆಸ್‌ ಇದಾದ್ದರಿಂದ ವಿಶ್ಯುಯಲ್‌ ಟ್ರೀಟಮೆಂಟ್‌ ಕೂಡ ಮುಖ್ಯ.  ‘ಪಲ್ಲಟ’ ಕನ್ನಡ ಸಿನಿಮಾದ ವಸ್ತು  ಸ್ಥಳೀಯ ಸಂಸ್ಕೃತಿಗಳ ಸ್ಥಿತ್ಯಂತರ ಹೇಗೆ ನಿಜ ಜೀವನದಲ್ಲಿ ಕೆಲವರ ಬದುಕನ್ನೇ ಮುಗಿಸಿಬಿಡುತ್ತದೆ ಎನ್ನುವುದು. ಇದು ಅಮಾನವೀಯ ಎನ್ನುವುದು ಚಿತ್ರದ ಒಳದನಿ. ಬಹುಕಾಲ ನಿಲ್ಲಬಲ್ಲ ಮತ್ತು ಕಾಡಬಲ್ಲ ಸಿನಿಮಾ ಆಗುವ ಅವಕಾಶವನ್ನು ಇದು ಸ್ವಲ್ಪದರಲ್ಲಿಯೇ ಕಳಕೊಂಡಿದೆ. ಇದರಾಚೆಗೂ ಚಿತ್ರ ಕೆಲವು ವಿಚಾರಗಳಿಗೆ ಸಂಬಂಧಿಸಿ ಚರ್ಚೆಗೆ ಯೋಗ್ಯವಾಗಿದೆ. ನಾಗರಿಕತೆ ಎಂಬುದು ಜನರೇ ಸೃಜಿಸಿಕೊಂಡಿದ್ದು. ಆಯಾ ಜನಪ್ರದೇಶಗಳಲ್ಲಿ ಕಾಲದ ಅಗತ್ಯಗಳಿಗೆ ತಕ್ಕುದಾದ ವ್ಯವಸ್ಥೆಯೊಂದು ರೂಪುಗೊಂಡಿರುತ್ತದ...