ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಅಕ್ಟೋಬರ್ 30, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಪರ್ಯಾಯ: ಗೌಡರತ್ತ ಎಲ್ಲರ ಚಿತ್ತ!

ಹಣ ಮತ್ತು ಜಾತಿ, ಇವೆರಡಕ್ಕೇ ರಾಜ್ಯದ ಹಣೆಬರಹ ಬರೆಯುವ ಶಕ್ತಿ ಇದೆ! ಎಂಥಾ ದುರವಸ್ಥೆ ಪ್ರಜಾತಂತ್ರದ್ದು? ಹಣ ಬಲದಿಂದ ಗಣಿಧಣಿಗಳು ಏನು ಬೇಕಾದರೂ ಮಾಡಬಲ್ಲ ತಾಕತ್ತು ಹೊಂದಿದ್ದಾರೆ। ಜಾತಿ ಬಲ ಒಂದರಿಂದಲೇ ರಾಜ್ಯ ನಿಯಂತ್ರಿಸಬಲ್ಲೆ ಎಂದು ಯಡಿಯೂರಪ್ಪ ಕೂತಂತಿದೆ। ಎರಡೂ ಅತಿರೇಕಕ್ಕೆ ಏನು ಹೇಳುವುದು? ಪಕ್ಷಗಳಲ್ಲಿ ಅಥವಾ ಸಂಘಟನೆಗಳಲ್ಲಿ ಭಿನ್ನಾಭಿಪ್ರಾಯ ಸಹಜವೇ। ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ರಚನಾತ್ಮಕ ಕಾರ್ಯಕ್ಕೆ ಸಂಘಟಿತರಾಗುವುದು ಯಾವುದೇ ಸಂಘಟನೆಗೆ ಅನಿವಾರ್ಯದ ಸೌಹಾರ್ದತೆ। ಕನಿಷ್ಠ ಮಟ್ಟದ ಸೌಹಾರ್ದತೆ ಸಾಧ್ಯವಾಗದಂಥ ಸ್ಥಿತಿಗೆ ಬಂದಾಗ ಸಂಧಾನ, ರಾಜಿ ಮಾರ್ಗ ಹಿಡಿಯುವುದು ಹಾಸ್ಯಾಸ್ಪದವಾಗುತ್ತದೆ। ಪರಸ್ಪರ ಆತಂಕ ಮತ್ತು ಅಭದ್ರತೆಯ ನಡುವೆ ಕೂಡಿ ಬಾಳೋದು ದುಸ್ತರವೇ। ಹಾಗೆ ಅಸಮಾಧಾನಗಳ ನಿಗಿ ನಿಗಿ ಕೆಂಡಗಳನ್ನು ಸೆರಗಿನಲ್ಲಿಟ್ಟಕೊಂಡು ಬಹುದೂರ ಸಾಗಲು ಸಾಧ್ಯವೇ ಆಗುವುದಿಲ್ಲ। ಎಲ್ಲಿ ಲಾಭವಿದೆಯೋ ಅಲ್ಲಿ ಸಂಘರ್ಷ ಇದ್ದದ್ದೇ। ಆರಂಭದಿಂದಲೂ ಕೇವಲ ವಸೀಲಿಬಾಜಿ, ಸಂಖ್ಯೆ ಹೊಂದಾಣಿಕೆಗೆ ಖರೀದಿ ತಂತ್ರ ಬಳಕೆ, ಕಡೆಗೆ ಸ್ಥಾನ ಭದ್ರ ಮಾಡಿಕೊಳ್ಳಲು ಆಪರೇಷನ್ ಕಮಲ್ ಎನ್ನುವ ಕೆಟ್ಟ ರಾಜಕೀಯ ಸಂಪ್ರದಾಯಕ್ಕೆ ಶರಣು... ಇಂಥ ಅತಿರೇಕದ ವರ್ತನೆಯಿಂದ ಸುದ್ದಿಯಲ್ಲೇ ಇದ್ದ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇದೆಲ್ಲ ನಿರೀಕ್ಷಿತ ಬೆಳವಣಿಗೆಯೇ। ಆಪರೇಷನ್ ಕಮಲ್ ಯಶಸ್ಸಿನ ಅಮಲಿನಲ್ಲಿ ಯಡಿಯೂರಪ್ಪ ಪಾವರ್ ಫುಲ್ ನಾಯಕರಾಗಲು ಯತ್ನಿಸಿದ