DILSE: ಸೋರುತಿಹುದು ಮನೆಯ ಮಾಳಿಗಿ...: "HOME Directed By: Yann Arthus-Bertrand Plot: With aerial footage from 54 countries, Home is a depiction of how the Earth's problem..."
ಕಲಾವಿದನೊಬ್ಬನ ಕಲೆಯ ಬಗೆಗಿನ ಅನುರಾಗ, ಶ್ರದ್ಧೆ, ವಿಶ್ವಾಸಾರ್ಹತೆ ಮತ್ತು ಧ್ಯಾನ ಎಲ್ಲವೂ ಬದ್ಧತೆಯಿಂದ ಕೂಡಿರುತ್ತದೆ. ಅವನೊಳಗೇ ಒಂದು ಸ್ವರ್ಗ ಸಮಾನವಾದ ಜಗತ್ತೊಂದು ರೂಪುಗೊಂಡಿರುತ್ತದೆ. ಅದನ್ನು ಬೇಕಿದ್ದರೆ ಕಾವ್ಯದ ಅಂತಃದೃಷ್ಟಿ, ಅಂತಃಪ್ರಜ್ಞೆ ಅಥವಾ ಅಂತಃ ಸೂಕ್ಷ್ಮತೆ ಅಂತ ಅನ್ನಿ. ಕಾವ್ಯ ಎಂದಾಕ್ಷಣ ಅಕ್ಷರಗಳ ಕಲಾಕೃತಿ ಅಲ್ಲ. ಕಾವ್ಯ ಅಥವಾ ಪೊಯಟ್ರಿ ಅನ್ನೋದು ಎಲ್ಲದರೊಳಗೂ ಇರುವ ಅವ್ಯಕ್ತ ಸೂಕ್ಷ್ಮ. ಅದನ್ನು ಅಭಿವ್ಯಕ್ತಿಸಲು ನಾವು ಕಂಡುಕೊಳ್ಳುವ ಮಾರ್ಗಗಳಲ್ಲಿ ಅಕ್ಷರ, ಶಬ್ದ, ಧ್ವನಿ, ಚಿತ್ರ, ಅಭಿನಯ.. ಎಲ್ಲವೂ ಒಂದು ಮಾಧ್ಯಮ. ಕಲಾವಿದ ಅಥವಾ ಕವಿ ತಾನು ಸೃಜಿಸಹೊರಟ ಕೃತಿಯಲ್ಲಿ ಇದೆಲ್ಲವನ್ನು ಪ್ರಯೋಗಕ್ಕೊಳಪಡಿಸಿ ಅದರ ಸಾರವನ್ನೇ ಅಭಿವ್ಯಕ್ತಿಯಲ್ಲಿ ಎರಕಹೊಯ್ಯುತ್ತಾನೆ. ಹಾಗಾದಾಗ ಆ ಕಲಾಕೃತಿಯಲ್ಲಿ ಧ್ವನಿಸುತ್ತಿರುವುದು ಅವನ ದೃಷ್ಟಿ, ಪ್ರಜ್ಞೆ, ತತ್ವ, ಅಭಿಪ್ರಾಯ ಆಗುತ್ತದೆ. ಇದಕ್ಕೂ ಮಿಗಿಲಾಗಿ ಅದು ಆತನ ಅನುಭಾವ ಪರಪಂಚವೇ ಆಗುತ್ತದೆ. ಪ್ರತಿನಿಧಿಸುವ ತತ್ವ ಅವನದೇ ಆಗಬಹುದು. ಅದಕ್ಕವನು ಬದ್ಧನೂ ಆಗಬಹುದು. ಇಲ್ಲವೇ ಅರಾಜಕತೆಯ ಹಾಗೊಂದು ಭಾವದಲ್ಲಿ ತನಗೂ ತನ್ನ ಕಲಾಕೃತಿಗೂ ಸಂಬಂಧವೇ ಇಲ್ಲ ಎಂದು ವಾದಿಸಬಹುದು. ಅರಾಜಕತೆಯಿಂದ ಕೂಡಿದ ಯಾವುದೂ ಬಹುಕಾಲ ಬಾಳಿ ಬದುಕುವಂಥದ್ದಲ್ಲ ಎನ್ನುವ ಎಚ್ಚರ ಕೂಡ ಮುಖ್ಯ. ಮತ್ತೆ ಕಲಾವಿದನ ಅಭಿವ್ಯಕ್ತಿಯನ್ನು ಬರಿಯ ಸಾಂಸ್ಕೃತಿಕ ನೆಲೆಯಲ್ಲಿ ಮಾತ್ರ ಕಾಣಬೇಕಿಲ್ಲ. ಅದು ಸಮ...
ಕಾಮೆಂಟ್‌ಗಳು