ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್ 30, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹೊಸ ಬೆಳಕು ಹಬ್ಬಿಸಲು ಕಾದು ಕೂತ ದೀಪಗಳು...

ಈ ಜೀವಜಗತ್ತಿನ ಬಂಡಿ ಸಾಗಿಸುವ ಭಾರವೆಲ್ಲ ಹೆಣ್ಣಿಗೇ ಏಕೆ? ಹಟಕ್ಕೆ ಹೆಸರಾದ ಹೆಣ್ಣು ತಾಯಿಯಾಗುವಾಗ ನಮ್ಮನ್ನೆಲ್ಲ ಸಣ್ಣಗೆ ಅಲುಗಾಡಿಸಿಬಿಡುತ್ತಾಳೆ. ಅದಕ್ಕೇ ಜನಪದ ಮತ್ತು ಎಲ್ಲ ಧರ್ಮ ಗ್ರಂಥಗಳಲ್ಲೂ ತಾಯಿಗೆ ದೊಡ್ಡ ಸ್ಥಾನವಿದೆ. ಖುರಾನ್ ನಲ್ಲೂ. ಒಂದು ಉರ್ದು ಕವಿತೆ ಹೀಗೆ ಬಣ್ಣಿಸಿದೆ. ಈ ಜಗವ ರೂಪಿಸಿದವ ತಾಯಿಗೆಂಥಾ ಶ್ರೇಷ್ಠ ದರ್ಜೆ ಕೊಟ್ಟ ಅವಳ ಒಂದು ಪ್ರಾರ್ಥನೆಯಲ್ಲಿ ಎರಗಿದ ಕಂಟಕ ಪರಿಹರಿಸುವ ಶಕ್ತಿಯನಿತ್ತ! ಖುರಾನ್ ಇವಳ ಮಮತೆಯ ಹೀಗೆ ಬಣ್ಣಿಸಿದೆಯಲ್ಲಾ ದೇವರು ಸ್ವರ್ಗವನ್ನೇ ತಾಯ ಪಾದಕ್ಕೆಸೆದುಬಿಟ್ಟ!  ಅದೆಷ್ಟು ಬರಹಗಾರರು ಹೆಣ್ಣಿನ ತಾಯಿಗುಣ ಬಣ್ಣಿಸಿದ್ದು ಸುಮ್ಮನೇ ಅಲ್ಲ. ಈ ಉಪಖಂಡ ಕಂಡ ಅದ್ಭುತ ಕವಿ ಅಲ್ಲಾಮಾ ಇಕ್ಬಾಲ್ ತಮ್ಮ "ಮಾ ಕಾ ಖ್ವಾಬ್" ಕವಿತೆಯಲ್ಲಿ ತಾಯಿಯ ಕನಸು ಜೀವದ ಒಂದಿಡೀ ಪಯಣವನ್ನೇ ಬಿಚ್ಚಿಡುತ್ತದೆ. ಅಲ್ಲಿ ಜನ್ಮಭೂಮಿ, ದೇಶ, ಜಗತ್ತು ತಾಯಿಪಾದದ ಧೂಳಿನ ಕಣದಂತೆನಿಸಿಬಿಡುತ್ತದೆ. ಇದೇ ಜಾಡಿನಲ್ಲಿ ನಮ್ಮ ಲಂಕೇಶ್ ಕೂಡ... "ಅವ್ವ ನನ್ನವ್ವ ಫಲವತ್ತಾದ ಕಪ್ಪು ನೆಲ..." ಎಂದರಲ್ಲವೇ. ನೆಲವೆಂದರೆ ತಾಯ್ನೆಲವೂ ಹೌದು, ಜಗತ್ತೂ ಹೌದು. ಕೆಲವರಿಗದು ಭಾರತಮಾತೆ, ಕರ್ನಾಟಕಮಾತೆ....  ತಾಯಿ ಒಂದು ಸೀಮಿತ ವ್ಯಾಪ್ತಿಯಲ್ಲ. ಎಲ್ಲದರ ಮೂಲ. ಅದರ ಹರವು ಕ್ಷಿತಿಜದಾಚೆಗೂ....  ಆರ್ಕಿಮಿಡಿಸ್ ಹೇಳುತ್ತಿದ್ದನಂತೆ, ನಿಲ್ಲಲು ಜಾಗ ಮತ್ತು ಸೂಕ್ತ ಹಾರೆ ಸಿಕ್ಕರೆ ಜಗವನ್ನೇ ಅಲುಗಾಡಿಸಬಲ್ಲೆ!.. ನಿಸರ