ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್ 24, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಾಡುಹಕ್ಕಿಗೆ ಬೇಕೆ ಬಿರುದು ಸನ್ಮಾನ...

ಉಪಖಂಡದ ಮಹಾನ್ ಗಾಯಕನ ಬಗ್ಗೆ ಅವರ ಸೊಸೆ ಬರೆದ ಪುಸ್ತಕ ಓದಿದೆ.  ಅಬ್ಬಾ (ತಂದೆ ಎಂದರ್ಥ. ಸೊಸೆಗೆ ಮಾವ, ತಂದೆಯಾಗೋದು ಎಂಥ ಅದ್ಭುತ ಭಾವನೆ..) ಎಂದೇ  ಆ ಗಾಯಕನನ್ನು ಗೌರವಿಸುವ ಸೊಸೆಯ ಅಭಿಮಾನ, ಅಂತಃಕರಣದ ಮಾನವೀಯ ಪರಿ ನನಗಂತೂ ಖುಷಿಕೊಟ್ಟಿತು. ಇಡೀ ಪುಸ್ತಕದ ತುಂಬ ಅಬ್ಬಾ ನಸುನಕ್ಕಿದ್ದಾರೆ. ಹೆಮ್ಮೆಯ ಭಾವದಲ್ಲಿ ಕಾಣುತ್ತಾರೆ. ನನ್ನ ಅಮ್ಮೀಗೂ ಈ ಗಾಯಕನ ಹಾಡುಗಳೆಂದರೆ ಪ್ರಾಣ. ಆಕೆಯ ಬಾಯಿಂದ ಹಲವು ಹಾಡುಗಳನ್ನು ಕೇಳಿಸಿಕೊಂಡಿದ್ದೇನೆ. ಕಲಿತಿದ್ದೇನೆ. ನನ್ನ ದೊಡ್ಡ ಮಾಮ (ಮಾಸ್ಟರ್ ಮೊಹಮ್ಮದ್ ಅಲೀ ಮುದ್ನಾಳ್) ಇವರನ್ನು ಹತ್ತಿರದಿಂದ ಕಂಡಿದ್ದರ ಬಗ್ಗೆ ಕೇಳಿ ರೋಮಾಂಚಿತಗೊಂಡಿದ್ದೆ.  ಆ ಅಪ್ರತಿಮ ಗಾಯಕನ ಹಳೆಯ ಹಾಡು ಹಾಡುತ್ತ, ಅನುವಾದ ಮಾಡುತ್ತ ಅಂತೂ ಆತನ ಒಂದಿಡೀ ಚರಿತ್ರೆಯನ್ನು ಕಣ್ಮುಂದೆ ಕಂಡೆ. ಆನಂದಿಸಿದೆ. ಅವಾಕ್ಕಾದೆ. ಅಭಿಮಾನಪಟ್ಟೆ. ಅದನ್ನು ಹೀಗೆ ಬರೆದು ಬಿಟ್ಟೆ. ಇಡೀ ಪುಸ್ತಕದ ಅನುವಾದ ಮಾಡುತ್ತಿದ್ದೇನೆ. ಅದರ ಆಯ್ದ ಭಾಗಗಳನ್ನು ಇಲ್ಲಿ ನೀಡುತ್ತಿದ್ದೇನೆ. ಇಂದು ಗಾಯಕನ ಜನ್ಮದಿನ (ಡಿಸೆಂಬರ್ 24). ಅಬ್ಬಾ... ದೇಶ ವಿಭಜನೆಗೂ ಮುನ್ನ ಅಬ್ಬಾ ಕುಟುಂಬ ಲಾಹೋರಿನಲ್ಲಿತ್ತು. ಸ್ಥಿತಿವಂತ ಮತ್ತು ಧಾರ್ಮಿಕ ಸಂಪ್ರದಾಯಸ್ಥ ಕುಟುಂಬ ಅವರದ್ದಾಗಿತ್ತು. ಅಬ್ಬಾ ಹೊಂದಿದ್ದ ಲೈಫ್ ಸ್ಟೈಲ್ ಮತ್ತು ಗತ್ತು ಇದಕ್ಕೆ ಸಾಕ್ಷಿಯಂತೇ ಇತ್ತು. ತಂದೆ ಹಾಜಿ ಮೊಹಮ್ಮದ್ ಅಲೀ ಮತ್ತು ತಾಯಿ ಅಲ್ಲಾರಖೀ. ಈ ದಂಪತಿಗೆ ಒಟ್ಟು ಎಂ