ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

ಅವಧಿಯ ಮೋಹನ್ ಸರ್ ಗೆ ದಿಲ್ ಸೇ ಸಲಾಂ...

ನನ್ನ ಪುಟ್ಟ ಯತ್ನವೊಂದನ್ನು ಗಮನಿಸಿ, ಬೆನ್ನು ತಟ್ಟಿದ್ದಕ್ಕೆ... ಬ್ಲಾಗ್ ದುನಿಯಾದಲ್ಲಿ ಈ ದಿಲ್ ಗೂ ಒಂದಷ್ಟು ಪ್ರೀತಿ ತೋರಿದ್ದಕ್ಕೆ... ಒಟ್ಟಾರೆ ಮೀಡಿಯಾ ಜಗತ್ತಿನಲ್ಲಿ ಅವಧಿ ಮೂಲಕ ಹೊಸದೊಂದು ಸಾಧ್ಯತೆಯನ್ನು ತೆರೆದಿಡುತ್ತಿರುವ ಮೋಹನ್ ಸರ್  ಕಾಳಜಿಗಳಿಗೆ, ಆಶಯಗಳಿಗೆ ...  ಥ್ಯಾಂಕ್ಯೂ.  'ಅವಧಿ'ಯಂಥ ಸುಂದರ, ಅರ್ಥಪೂರ್ಣ ಯತ್ನಗಳು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೂ ಬಹುಮುಖ್ಯ ಬೆಳವಣಿಗೆಯಾಗುವುದರಲ್ಲಿ ಸಂದೇಹವಿಲ್ಲ.  ಇಂಥ ಹೊಸ ಸಾಧ್ಯತೆಯ ಮತ್ತು ಅವಕಾಶಗಳ ಬಾಗಿಲುಗಳನ್ನು ತೆರೆದಿಡುವ ತಮ್ಮ ಸುಂದರ ಯತ್ನಕ್ಕೆ 'ದಿಲ್ ಸೇ' ಸಲಾಂ.

ನಾನು ನೀನಾಸಂ ಪದವೀಧರನಲ್ಲ...

ನೀನಾಸಂ ಪದವಿ ನನ್ನ ತಲೆಗೆ ಅನಗತ್ಯ ಭಾರ ಸ್ವಾಮೀ. ಅಷ್ಟು ಕಪ್ಪು ಸುಂದರಿಯರ ಭಾರವೇ ನನ್ನ ತಲೆಗೆ ಸಾಕಾಗಿ ಹೋಗಿದೆ. ಇನ್ನು ಇಷ್ಟು 'ವಜನ್' ಪದವಿ ಕಿರೀಟ ಬೇಡವೇ ಬೇಡ. ಸುಮ್ಮನೇ ಖಾಸಗಿಯಾಗಿ ಡೈರಿಯ ಹಾಗೆ ಬೆಚ್ಚಗೆ ನನ್ನ ಜತೆಗೆ ಸದಾ ಇರಲಿ ಎಂದುಕೊಂಡು ಈ ಬ್ಲಾಗ್ ರೂಪಿಸಿದ್ದೇನಷ್ಟೇ. ಅವಧಿ ಬ್ಲಾಗ್ ನನ್ನ ಈ ಪುಟ್ಟ ಯತ್ನಕ್ಕೆ ಬೆನ್ನು ತಟ್ಟಿದ್ದು ಸಂತೋಷವೇ. ಆದರೆ, ನನ್ನ ಬಗ್ಗೆ ಬೆನ್ನುತಟ್ಟುವ ಸಾಲುಗಳ ಬರೆಯುತ್ತ ನೀನಾಸಂ ಪದವೀಧರ ಎನ್ನುವ ಒಂದು ತಪ್ಪು ಮಾಹಿತಿ ಕೂಡ ನುಸುಳಿಕೊಂಡಿದೆ. ಸ್ವಾಮೀ ನಾನೀ ನೀನಾಸಂ ಸುದ್ದಿಗೇ ಹೋದವನಲ್ಲ. ಅಲ್ಲಿ ಕಲಿತು ಬಂದವರ ಜತೆ 'ಬೇಜಾನ್' ಜಗಳ ಮಾಡಿದಿನಿ ಅಷ್ಟೇ.

ಆ ಕನಸಿನ ಬಣ್ಣಗಳು... ಹಾಲ್ಕುರಿಕೆ ಥಿಯೇಟರ್ ಮೂಡಿಸಿದ ಅದ್ಭುತ ರಂಗಹಾದಿ

ಥಿಯೇಟರ್ ಆಫ್ ಎಮೋಷನ್ಸ್... ಬದುಕು ತುಂಬ ಸಂಕೀರ್ಣತೆಗಳಿಂದ ಕೂಡಿರುವಂಥದು. ಯಾವುದೂ ಅಷ್ಟು ಸರಳವಲ್ಲ. ಹಾಗೆ ನೋಡಿದರೆ ಮನುಷ್ಯ ಪ್ರೀತಿ ಮತ್ತು ಒಟ್ಟಾರೆಯಾಗಿ ಬದುಕು ಅತ್ಯಂತ ಸರಳ ಹಾಗೂ ಸಹಜತೆಯಿಂದ ಕೂಡಿರಬೇಕಿತ್ತು. ಹಾಗಾಗುತ್ತಿಲ್ಲ. ಬದುಕು ಇತ್ತೀಚೆಗಂತೂ ತುಂಬ ಸಂಕೀರ್ಣಗೊಳ್ಳುತ್ತ ಸಾಗಿದೆ. ಅದು ಮುಂಚಿನ ಸಹಜ ಸಂಭ್ರಮಗಳಿಂದ ದೂರವಾಗಿ, ಮೈಗೂಡಿಸಿಕೊಂಡ ಚಟ ಮತ್ತು ಖಯಾಲಿಗಳಿಂದ ನರಳುತ್ತಿದೆ.  ಮಟಿರಿಯಲಿಸ್ಟಿಕ್ ಜಗತ್ತು ವಸ್ತುಗಳಲ್ಲಿ ಸುಖವನ್ನು ತೋರಿಸುತ್ತಿದೆ. ಅದನ್ನು ಕೊಂಡುಕೊಳ್ಳುವುದಕ್ಕೇ ನಾವೆಲ್ಲ ಇಷ್ಟು ದುಡಿಯೋದು ಮತ್ತು ಸಂಪಾದಿಸೋದು ಎಂದು ಜಾಹಿರಾತುವಿನ ಮೂಲಕ, ಸೀರಿಯಲ್, ಸಿನಿಮಾ ಮೂಲಕ ಹೇಳುತ್ತಿದೆ. ನಾವದನ್ನು ನಂಬಿ ಕೂತಿದ್ದೇವೆ. ಹೆಚ್ಚು ಸಂಪಾದನೆ ಅಂದರೆ ಹೆಚ್ಚೆಚ್ಚು ಚಾಯ್ಸ್! ವಸ್ತು ಹೊಂದುವುದಕ್ಕೆ ಚಾಯ್ಸ್ ಹೇಗೋ ಸುಖಕ್ಕೂ ವಿವಿಧ ನಮೂನೆಗಳು... ಹಣ ಎಲ್ಲವನ್ನು ತಂದುಕೊಡಲ್ಲ ಎಂದು ನಾವೆಲ್ಲ ಹೇಳಿಕೊಳ್ಳುತ್ತಿದ್ದೆವು. ಆದರೆ, ಇಂದು ಹಣ ಎಲ್ಲವನ್ನು ಸಾಧ್ಯವಾಗಿಸುತ್ತಿದೆಯಲ್ಲ! ಸೆಕ್ಸ್ ಕೂಡ ಎರಡು ಆರ್ಗನ್ ನಡುವಿನ ಸಂಬಂಧ, ಎರಡೂ ಲಿಂಗಗಳಿಗೆ ಪರಸ್ಪರ ಕೊಡುಕೊಳ್ಳುವಿಕೆ ಮಾತ್ರ ಮುಖ್ಯವಾಗಿದೆ. ಅದು  ವಿಜಾತಿ ಮತ್ತು ಸಜಾತಿ ಎರಡೂ ಆದೀತು. ಅದೂ ಸಿಕ್ಕದಿದ್ದರೆ ನೇರವಾಗಿ ನಿಮ್ಮದೇ ಒಂದನ್ನು ಸಿದ್ಧಪಡಿಸಿಕೊಂಡರಾಯ್ತು! ಇಷ್ಟು ಸಿಂಪಲ್ ಆಗಿದೆ ಸುಖದ ಕಲ್ಪನೆ! ದೇಹ ಸಂಬಂಧ ಮತ್ತು ಪ್ರೀತಿ ಎರಡಕ್ಕೂ ಅಂಥ ಸಂಬಂ

ಯಡಿಯೂರಪ್ಪ ಮತ್ತು 'ಮ್ಯಾಕ್ ಬೆತ್'

ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ ಕಥೆ ಮ್ಯಾಕ್ ಬೆತ್ ದುರಂತ ನಾಟಕದಂತೆ ಸಾಗುತ್ತಿದೆ। ಶೇಕಸ್ಪಿಯರ್ ರಾಜಕೀಯ ದುರಂತ ನಾಟಕಗಳಲ್ಲಿ ತುಂಬ ಮಹತ್ವದ ನಾಟಕ ಮ್ಯಾಕ್ ಬೆತ್। ಶೂರ, ಧೀರ, ದಿಟ್ಟನೂ ಆದ ಮ್ಯಾಕ್ ಬೆತ್ ಹೇಗೆ ದುರಾಸೆಗೆ ಬಿದ್ದು ರಾಜಕಾರಣದ ಅಹಮಿಕೆಯಿಂದ ಪತನವಾಗುತ್ತಾನೆ ಎನ್ನುವುದು ಕಥಾ ಹಂದರ. ಅದರ ಒಳಸುಳಿಗಳೆಲ್ಲ ಮನುಷ್ಯ ದುರಂತವನ್ನು ಹೇಳುತ್ತವೆ। ಅದು ರಾಜಕೀಯ ಅಧಿಕಾರ, ಶಕ್ತಿ, ಯುಕ್ತಿಯ ದುರಂತ। ಒಟ್ಟು ದುರಾಸೆಯ ವ್ಯಕ್ತಿಗಳ ದುರಂತ ... ಮ್ಯಾಕ್ ಬೆತ್ ನಾಟಕ ಸಂಕ್ಷಿಪ್ತವಾಗಿ ಹೀಗಿದೆ: ಸ್ಕಾಟ್ಲೆಂಡಿನ ರಾಜ ಡಂಕಣನನ್ನು ಕೊಲೆ ಮಾಡಿ ಮ್ಯಾಕ್ ಬೆತ್ ರಾಜನಾಗುತ್ತಾನೆ। ವೀರ, ಸಾಹಸಿ ಮತ್ತು ಅತ್ಯಂತ ಸ್ವಾಮಿನಿಷ್ಠನೂ ಆದ ಮ್ಯಾಕ್ ಬೆತ್ ಅತಿಮಾನುಷ ಶಕ್ತಿಗಳ ದುರಾಸೆಗೆ ಬಲಿಯಾಗುತ್ತಾನೆ। ಧೀರ, ದಿಟ್ಟತನ ಬಿಟ್ಟು ಸಂಚು, ವಂಚನೆ, ಕ್ರೌರ್ಯಗಳಿಗೆ ಮನಸ್ಸುಕೊಟ್ಟು ನೀಚನಾಗುತ್ತಾನೆ। ಅವನ ಹೆಂಡತಿ ಇವನನ್ನು ಅತಿವ ಪ್ರೀತಿಸುವವಳು। ರಾಜರ ರಾಜನಾಗಲೆಂಬ ಸಹಜ ಬಯಕೆ ಹೊಂದಿದವಳು। ತಮ್ಮಿಬ್ಬರ ಸಂಚಿನಿಂದ ನಡೆದ ಕೊಲೆಗಳ ಸರಮಾಲೆಯಿಂದ ಕಂಗಾಲಾಗಿ ಮನೋರೋಗಿಯಾಗಿ ಮ್ಯಾಕ್ ಬೆತ್ ಹೆಂಡತಿ ಸಾಯುತ್ತಾಳೆ। ಮ್ಯಾಕ್ ಬೆತ್ ಯಕ್ಷಿಣಿಯರ ಚೆಲ್ಲಾಟ ಅರ್ಥಮಾಡಿಕೊಳ್ಳದೇ ಹೋಗುತ್ತಾನೆ। ಅದು ಅರ್ಥವಾಗುವಷ್ಟೊತ್ತಿಗೆ ಎಲ್ಲ ಕೈಮೀರಿರುತ್ತದೆ। ಮ್ಯಾಕ್ ಡೆಫ್ ನಿಂದ ಮ್ಯಾಕ್ ಬೆತ್ ಕೊಲೆ ನಡೆಯುತ್ತದೆ। ಡಂಕಣನ ಮಗ ಮಾಲ್ಕಂ ರಾಜನಾಗುತ್ತಾನೆ। ಮ್ಯಾಕ್ ಬೆತ್ ಕಥ