ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ನವೆಂಬರ್ 4, 2009 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಯಡಿಯೂರಪ್ಪ ಮತ್ತು 'ಮ್ಯಾಕ್ ಬೆತ್'

ನಮ್ಮ ಮುಖ್ಯಮಂತ್ರಿ ಯಡಿಯೂರಪ್ಪ ಕಥೆ ಮ್ಯಾಕ್ ಬೆತ್ ದುರಂತ ನಾಟಕದಂತೆ ಸಾಗುತ್ತಿದೆ। ಶೇಕಸ್ಪಿಯರ್ ರಾಜಕೀಯ ದುರಂತ ನಾಟಕಗಳಲ್ಲಿ ತುಂಬ ಮಹತ್ವದ ನಾಟಕ ಮ್ಯಾಕ್ ಬೆತ್। ಶೂರ, ಧೀರ, ದಿಟ್ಟನೂ ಆದ ಮ್ಯಾಕ್ ಬೆತ್ ಹೇಗೆ ದುರಾಸೆಗೆ ಬಿದ್ದು ರಾಜಕಾರಣದ ಅಹಮಿಕೆಯಿಂದ ಪತನವಾಗುತ್ತಾನೆ ಎನ್ನುವುದು ಕಥಾ ಹಂದರ. ಅದರ ಒಳಸುಳಿಗಳೆಲ್ಲ ಮನುಷ್ಯ ದುರಂತವನ್ನು ಹೇಳುತ್ತವೆ। ಅದು ರಾಜಕೀಯ ಅಧಿಕಾರ, ಶಕ್ತಿ, ಯುಕ್ತಿಯ ದುರಂತ। ಒಟ್ಟು ದುರಾಸೆಯ ವ್ಯಕ್ತಿಗಳ ದುರಂತ ... ಮ್ಯಾಕ್ ಬೆತ್ ನಾಟಕ ಸಂಕ್ಷಿಪ್ತವಾಗಿ ಹೀಗಿದೆ: ಸ್ಕಾಟ್ಲೆಂಡಿನ ರಾಜ ಡಂಕಣನನ್ನು ಕೊಲೆ ಮಾಡಿ ಮ್ಯಾಕ್ ಬೆತ್ ರಾಜನಾಗುತ್ತಾನೆ। ವೀರ, ಸಾಹಸಿ ಮತ್ತು ಅತ್ಯಂತ ಸ್ವಾಮಿನಿಷ್ಠನೂ ಆದ ಮ್ಯಾಕ್ ಬೆತ್ ಅತಿಮಾನುಷ ಶಕ್ತಿಗಳ ದುರಾಸೆಗೆ ಬಲಿಯಾಗುತ್ತಾನೆ। ಧೀರ, ದಿಟ್ಟತನ ಬಿಟ್ಟು ಸಂಚು, ವಂಚನೆ, ಕ್ರೌರ್ಯಗಳಿಗೆ ಮನಸ್ಸುಕೊಟ್ಟು ನೀಚನಾಗುತ್ತಾನೆ। ಅವನ ಹೆಂಡತಿ ಇವನನ್ನು ಅತಿವ ಪ್ರೀತಿಸುವವಳು। ರಾಜರ ರಾಜನಾಗಲೆಂಬ ಸಹಜ ಬಯಕೆ ಹೊಂದಿದವಳು। ತಮ್ಮಿಬ್ಬರ ಸಂಚಿನಿಂದ ನಡೆದ ಕೊಲೆಗಳ ಸರಮಾಲೆಯಿಂದ ಕಂಗಾಲಾಗಿ ಮನೋರೋಗಿಯಾಗಿ ಮ್ಯಾಕ್ ಬೆತ್ ಹೆಂಡತಿ ಸಾಯುತ್ತಾಳೆ। ಮ್ಯಾಕ್ ಬೆತ್ ಯಕ್ಷಿಣಿಯರ ಚೆಲ್ಲಾಟ ಅರ್ಥಮಾಡಿಕೊಳ್ಳದೇ ಹೋಗುತ್ತಾನೆ। ಅದು ಅರ್ಥವಾಗುವಷ್ಟೊತ್ತಿಗೆ ಎಲ್ಲ ಕೈಮೀರಿರುತ್ತದೆ। ಮ್ಯಾಕ್ ಡೆಫ್ ನಿಂದ ಮ್ಯಾಕ್ ಬೆತ್ ಕೊಲೆ ನಡೆಯುತ್ತದೆ। ಡಂಕಣನ ಮಗ ಮಾಲ್ಕಂ ರಾಜನಾಗುತ್ತಾನೆ। ಮ್ಯಾಕ್ ಬೆತ್ ಕಥೆ