ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜೂನ್, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮೈಕಲ್ ಜಾಕಸನ್: ಕರಿಯ ಕುಣಿದ ದಮನಿತರ ಕಾವ್ಯ

ಶನಿವಾರದ ಸೂರ್ಯ ಮುಳುಗುತ್ತಿದ್ದ ಹೊತ್ತು ನನ್ನ ಮಗುವಿನೊಂದಿಗೆ ಹೊರಟು ನಿಂತಿರುವೆ ಹೊಸ ಸೂರ್ಯ ಮೂಡುವ ದಿಕ್ಕಿನೆಡೆಗೆ. ಮಗು ಗಂಡೊ ಹೆಣ್ಣೊ? ಯಾವುದಾದರೇನು ಸ್ವಾಮಿ, ಎಲ್ಲ ಒಂದೇ.. ಎರಡೂ ಅಂದುಕೊಳ್ಳಿ.. ನಾನು ಪವಾಡಗಳ ನಂಬುವೆ. ಈ ರಾತ್ರಿಯೇ ಆ ಪವಾಡ ನಡೆದುಹೋಗಿದೆ. ನೀವು ನನ್ನ ಕಂದನ ಬಗ್ಗೆ ಯೋಚಿಸುತ್ತೀರಿ ಎಂದಾದರೆ, ನೀವು ಕರಿಯರೊ ಬಿಳಿಯರೊ ಎನ್ನುವುದು ನನಗೆ ಮುಖ್ಯವೇ ಅಲ್ಲ. ನನ್ನ ಮಕ್ಕಳು ಶನಿವಾರದ ಸೂರ್ಯನ ಕುಂಡೆ ಮೇಲೆ ಬರೆ ಎಳೆದು ನಾಳಿನ ಸೂರ್ಯನ ಹಣೆಯ ಮೇಲೆ ನನ್ನ ಸಂದೇಶ ಬರೀತಾರೆ. ನಾನ್ಯಾರಿಗೂ ಕಮ್ಮಿ ಅಲ್ಲ ಎಂದು. ಮತ್ತು ನಾನವರಿಗೆ ಹೇಳಿದ್ದೇನೆ, ಸಮಾನತೆಯ ಬಗ್ಗೆ. ನೀವು ಒಪ್ಪುತ್ತೀರೊ, ಬಿಡುತ್ತೀರೋ ಸಮಾನತೆಯೊಂದೇ ಸತ್ಯ. ನೀವು ನನ್ನ ಕಂದನ ಬಗ್ಗೆ ಯೋಚಿಸುತ್ತೀರಿ ಎಂದಾದರೆ, ನೀವು ಕರಿಯರೊ ಬಿಳಿಯರೊ ಎನ್ನುವುದು ನನಗೆ ಮುಖ್ಯವೇ ಅಲ್ಲ. ನಾನೀ ರಕ್ಕಸನ (ರೇಸಿಸಂ) ಜತೆ ಸೆಣಸಿ ಹೈರಾಣಾಗಿರುವೆ. ಗುದಮುರಗಿ ಹಾಕುತ್ತ ದಣಿದಿರುವೆ, ಈ ಉಸಾಬರಿಯಿಂದ ಸುಸ್ತಾಗಿರುವೆ ಉಪಟಳ ಹೆಚ್ಚಾದಾಗೆಲ್ಲ ಅದರ ಕುಂಡೆ ಮೇಲೆ ಒದ್ದಿರುವೆ ಹೋರಾಟಕೆ ನಾನ್ಯಾರಿಗೂ ಅಂಜೆನು, ನಿಮ್ಮ ಶೈತಾನನ ಸಂತಾನಕೂ.. ಗುಂಪುಗಾರಿಕೆ, ಕ್ಲಬ್, ರಾಷ್ಟ್ರಗಳಿಗೇ ಎಲ್ಲಾ ರಕ್ಷಣೆ... ಇಲ್ಲಿ ಕೇಳುವವರೇ ಇಲ್ಲ ಮನುಷ್ಯ ಕುಲದ ಬವಣೆ? ಇದೆಲ್ಲ ಬೊಗಳೆ ವ್ಯವಹಾರ ಜಗದ ತುಂಬ. ಇದೆಲ್ಲ ಸುಮ್ಮನೇ ಯುದ್ಧ! ಪರ ವಿರೋಧದ ಕಥೆ ಕೇಳಿ ಏನಾಗಬೇಕು?