ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್ 25, 2010 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕೀ.ರಂ ನೆನಪಿನ ತೇರು...

ಅದನಾ ಹೋ ಯಾ ಆಲಾ ಹೋ ಸಬ್ ಕೋ ಲೌಟ್ ಜಾನಾ ಹೈ ಮುಫಲಿಸೋ ತವಂಗರಕಾ ಕಬ್ರ್ ಹೀ ಠಿಕಾನಾ ಹೈ... ರಾತ್ರಿ 11ರ (ಆಗಸ್ಟ್ 7, 2010)  ಸುಮಾರಿಗೆ ಗೆಳೆಯ ವಿಷ್ಣುಕುಮಾರ್ ಫೋನ್ ಮಾಡಿ ಕಿ.ರಂ ಹೋಗಿಬಿಟ್ರು ಎಂದ. ನಂಬೋಕಾಗಲಿಲ್ಲ. ಬೆಳಿಗ್ಗೆ ರವೀಂದ್ರ ಕಲಾಕ್ಷೇತ್ರದ ಸಂಸ ಬಯಲು ರಂಗಮಂದಿರದ ಕಟ್ಟೆ ಮೇಲೆ 'ನೀಗಿಕೊಂಡ ಸಂಸ' ಬರೆದ ನಾಟಕಕಾರ, ವಿಮರ್ಶಕ ಸುಮ್ಮನೇ ಮಲಗಿದಂತೆ ಕಾಣಿಸಿದ. ಒಂದಷ್ಟು ಕ್ಷಣ ಮುಂದೆ ನಿಂತು ಮನದಲ್ಲೇ ಆಖರೀ ಸಲಾಂ ಹೇಳಿ ಅಲ್ಲೇ ಇದ್ದ ಗೆಳೆಯರ ಗುಂಪಿಗೆ ಸೇರಿದೆ. ನಾಗತಿಹಳ್ಳಿ ರಮೇಶ್ ವ್ಯಾನ್ ನಲ್ಲಿ ಕ್ರಮೇಷನ್ ಗೆ ಹೋಗೋಣ ನಡೆಯಿರಿ ಎಂದು ತಮ್ಮ ಪಟಾಲಂ ಸೇರಿಸಿದ. ನನ್ನನ್ನೂ ಕರೆದೊಯ್ದರು. 'ಎಂದೂ ಎಲ್ಲೂ ನಿಲ್ಲದ, ಮಾತೇ ಮಾಣಿಕ್ಯ ಎಂದು ನಂಬಿದಂಥ, ದಾರಿಯುದ್ದಕ್ಕೂ ಆಶಯಗಳ ಸಾರುತ್ತ ಹೊರಟ ಸಾರೋ ಐನಾರನ ಹಾಗೆ, ಮೆಚ್ಚಿದ್ದನ್ನು, ಮೆಚ್ಚದೇ ಇದ್ದದ್ದನ್ನು ಏಕತಾರಿ ನಾದದಲ್ಲಿ ಹಾಡುತ್ತ ಹೊರಟ ಫಕೀರ, ದರವೇಶಿಯಂಥ.. ತನ್ನದೇ ಜ್ಞಾನದ ಧುನ್ ನಲ್ಲಿ ಮುಳುಗಿಹೋದ ಸೂಫಿಯಂಥ ಮನುಷ್ಯ ಹೊರಟು ಹೋದನಲ್ಲ...' ಎಂದೆಲ್ಲ ವ್ಯಾಖ್ಯಾನಿಸಲೆತ್ನಿಸಿದೆ. ಹುಟ್ಟು-ಸಾವಿನ ನಿರಂತರ ಪ್ರಕ್ರಿಯೆಯ ಸತ್ಯದೆದುರು, ಒಬ್ಬ ಮನುಷ್ಯ ಇನ್ನಿಲ್ಲ ಎನ್ನುವ ಹೊತ್ತಲ್ಲಿ ಏನು ಹೇಳಿದರೂ ಏನು ಬಂತು!?  ಆ ಎಲೆಕ್ಟ್ರಿಕ್ ಶವಾಗಾರಕ್ಕೆ ನಾನು ಹೋಗಿದ್ದು ಮೊದಲ ಸಲ. ಕಿ.ರಂ ಶರೀರದ ಮುಂದೆ ಬ್ರಾಹ್ಮಣ ಜೋರು ದನಿಯಲ್ಲಿ ಮಂತ್ರಗಳನ್ನೋದಿದ. ತನ್ನ ಲ