ವಿಷಯಕ್ಕೆ ಹೋಗಿ

ಜ್ಞಾನಪೀಠದ ಮೇಲೆ ಸಿರಿಸಂಪಿಗೆ!

ಸಿರಿಸಂಪಿಗೆ ನನ್ನ ಮೆಚ್ಚಿನ ನಾಟಕ. ಅದರ ದೀಪದಮೊಲ್ಲೆ ನನ್ನ ಮನಸಿನ ತುಂಬ ಕಾಡುವ ನಲ್ಲೆ!
ನಾಟಕದ ಕರ್ತೃ ಮತ್ತು ಮಹಾಕವಿ ಕಂಬಾರರ ಜತೆ ಒಂದು ವಿಶೇಷ ಸಂದರ್ಭದಲ್ಲಿ ಅವರ ಹುಟ್ಟೂರಿಗೆ ಭೇಟಿ ಕೊಡುವ ಅವಕಾಶ ಒದಗಿಬಂದಿತ್ತು. ಅವರೊಂದಿಗೆ ಒಂದಿಡೀ ದಿನ ನಡೆಸಿದ ಮಾತುಕತೆ, ಅವರನ್ನು ಹತ್ತಿರದಿಂದ ಕಂಡ ರೀತಿ ಮತ್ತು ಅವರ ದೈವ ಪ್ರೀತಿಯ ಬಗ್ಗೆ ತುಂಬ ದಿನಗಳ ಹಿಂದೆ ಬರೆಯಬೇಕೆಂದುಕೊಂಡಿದ್ದೆ. ಆಗಲಿಲ್ಲ. ಅವರ ಹತ್ತಾರು ಚಿತ್ರಗಳನ್ನು ಸೆರೆಹಿಡಿದ ಮೊಬೈಲ್ ಕಳಕೊಂಡೆ ಹೀಗಾಗಿ ಅದನ್ನು ಇಲ್ಲಿ ದಾಖಲಿಸಲಾಗಲಿಲ್ಲ. ಅವರೊಂದಿಗಿನ ಸ್ವಾರಸ್ಯಕರ ಚರ್ಚೆಯೂ ಅದರಲ್ಲಿ ರೆಕಾರ್ಡ್ ಮಾಡಿದ್ದೆ. ತುಂಬ ಮುಖ್ಯವಾದ ದಾಖಲೆಯೇ ಕಾಣೆಯಾಗಿದ್ದು ನನ್ನಲ್ಲಿ ಮರೆಯದ ನೋವು. ಆ ಎರಡು ದಿನದಲ್ಲಿ ಅವರನ್ನು ಕಂಡ ಪರಿಯ ಬಗ್ಗೆ ಇಷ್ಟರಲ್ಲೇ ಇಲ್ಲಿ ಹಂಚಿಕೊಳ್ಳುತ್ತೇನೆ.
ಅವರಿಗೆ ಜ್ಞಾನಪೀಠ ಪ್ರಶಸ್ತಿ ಬಂದಿದ್ದು ಖುಷಿಯ ಸಂಗತಿ. ಕಂಬಾರರಿಗೆ ಅಭಿನಂದನೆಗಳು.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಮನುಷ್ಯ ಜಾತಿ ತಾನೊಂದೇ ವಲಂ...

ಭಾರತದಲ್ಲಿ ಜಾತಿ ವ್ಯವಸ್ಥೆ ಹೇಗೆ ಹುಟ್ಟಿತು ಎಂಬುದಕ್ಕೆ ಯಾವುದೇ ನಿರ್ಧಿಷ್ಟ ಥಿಯರಿ ಇಲ್ಲ. ಆದರೆ, ಇಲ್ಲಿನ ವರ್ಗ ಸೃಷ್ಟಿ ಮಾತ್ರ ಇರಾನ್ ವ್ಯವಸ್ಥೆಯಂತೇ ಇದೆ.  ಪುರಾತನ ಇರಾನಿನ ಚರಿತ್ರೆಯಲ್ಲಿ ಇಂಥದೊಂದು ವ್ಯವಸ್ಥೆ ಇತ್ತು. ಅದಕ್ಕೆ ಪಿಸ್ತ್ರಾಸ್ ಎನ್ನುತ್ತಾರೆ. ನಮ್ಮಲ್ಲಿ ಅದು ಚಾತುರ್ವರ್ಣವಾಗಿದೆ. ಅಲ್ಲಿ ಅಥ್ರವಾನ್ಸ್ (ಪ್ರೀಸ್ಟ್ ಕ್ಲಾಸ್), ರಥೈಸ್ತಾ (ವಾರಿಯರ್ಸ್), ವಸ್ತ್ರಿಯಾ (ಮರ್ಕಂಟೈಲ್ ಕ್ಲಾಸ್) ಮತ್ತು ಹ್ಯುತಿ (ಆರ್ಟಿಸನ್) ಎನ್ನುವ ವರ್ಗ ವ್ಯವಸ್ಥೆ ಇದೆ. ನಮ್ಮಲ್ಲಿ ಇದನ್ನು ಕಲ್ಪಿಸಿಕೊಂಡರೆ ಪುರೋಹಿತ ಅಥವಾ ಬ್ರಾಹ್ಮಣ (ಅಥ್ರವಾನ್ಸ್), ಕ್ಷತ್ರಿಯ  (ರಥೈಸ್ತಾ), ವೈಶ್ಯ  (ವಸ್ತ್ರಿಯಾ) ಮತ್ತು ಶೂದ್ರ (ಹ್ಯುತಿ) ಎಂದು ಅರ್ಥೈಸಿಕೊಳ್ಳಬಹುದು.  ಆದಿ ಕಾಲದ ಇರಾನಿಯನ್ ವ್ಯವಸ್ಥೆ ಹೀಗೇ ಇತ್ತು. ಅದೇ ನಾಲ್ಕು ವರ್ಗಗಳು ಭಾರತದಲ್ಲೂ ಈಗಲೂ ಚಾಲ್ತಿಯಲ್ಲಿವೆ. ಹೀಗೆ ಒಂದು ಇರಾನ್ ಸಂಬಂಧ ಭಾರತಕ್ಕಿದೆ. ಚರ್ಮದ ಬಣ್ಣ, ನಯ ನಾಜೂಕು, ಕಣ್ಣು, ಬುದ್ಧಿವಂತಿಕೆಯನ್ನು ಹೋಲಿಸಿದರೆ ಭಾರತದ ಅದರಲ್ಲೂ ಉತ್ತರ ಭಾರತದ ಕಾಶ್ಮೀರಿ ಪಂಡಿತರು, ಉತ್ತರ ಪ್ರದೇಶದ ಪಂಡಿತ್, ಚಿತ್ಪಾವನ ಬ್ರಾಹ್ಮಣರು, ನಮ್ಮ ಕರಾವಳಿ ಮತ್ತು ಉತ್ತರ ಕನ್ನಡದ ಹವ್ಯಕರು ಹೆಚ್ಚೂ ಕಮ್ಮಿ ಇರಾನಿಗಳನ್ನು ಹೋಲುತ್ತಾರೆ (ಮೇಲ್ನೋಟಕ್ಕೆ).  ಬಹುಶಃ ಹೀಗೂ ಆಗಿರಬಹುದು, ಆಗ ಇರಾನ್ ನಲ್ಲಿ ಕ್ರೈಸ್ತ ಮತ್ತು ಇಸ್ಲಾಂ ಮುಂಚೆಯೂ ಹಲವಾರು ಸುಧಾರಣಾವಾದಿಗಳ ಅಥವಾ ಬಂಡುಕೋರರ

"ಮಣೆಗಾರ" ಬಸಿದಿಟ್ಟ ಒಡಲಾಳದ ನೋವು ನೆನೆದು...

ಹಾಲ್ಕುರಿಕೆ ಥಿಯೇಟರ್ ಕಾನ್ಸೆಪ್ಟ್ ಕನ್ನಡ ರಂಗಭೂಮಿಯಲ್ಲಿ ಹೊಸದೊಂದು ಸಂಚಲನವನ್ನುಂಟು ಮಾಡುತ್ತಿದೆ. ಒಟ್ಟಾರೆ ಭಾರತೀಯ ರಂಗಭೂಮಿ ಕಾಣುತ್ತಿರುವ ಹೊಸತನಕ್ಕೆ ಇದು ಮುಖ್ಯವಾದ ಸಾಕ್ಷಿ. ಅತ್ಯಂತ ಕ್ರಿಯಾಶೀಲ ತುಡಿತದ ರಂಗಕರ್ಮಿ ಹಾಲ್ಕುರಿಕೆ ಶಿವಶಂಕರ (ನಿರ್ದೇಶಕ/ನಾಟಕಕಾರ) ಇತ್ತೀಚೆಗೆ "ಮಣೆಗಾರ" (ತುಂಬಾಡಿ ರಾಮಯ್ಯನವರ ಆತ್ಮಕಥೆ) ಎನ್ನುವ ದಲಿತ ಕಥಾನಕವೊಂದನ್ನು ರಂಗದ ಮೇಲೆ ಅನಾವರಣಗೊಳಿಸಿದರು. ಪ್ರಯೋಗದ ದೃಷ್ಟಿಯಿಂದ ಕೆಲವು ಕೊರತೆಗಳು, ದೋಷಗಳು ಇವೆ. ಅದು ಯಾವುದೇ ಪ್ರಯೋಗಕ್ಕೆ ಇರುವಂಥವೇ. ಆದರೆ ಸಮುದಾಯವೊಂದರ ಒಡಲಾಳದ ನೋವನ್ನು ರಂಗದ ಮೇಲೆ ಬಸಿದಿಟ್ಟಾಗ  ಬೆಚ್ಚಿ ಬೀಳುವಂತಾಯಿತು. ವಿಶೇಷವಾಗಿ ದಲಿತೇತರಲ್ಲಿ ಸಾಮಾಜಿಕ ಪ್ರಜ್ಞೆ, ಜವಾಬ್ದಾರಿಯನ್ನು ಬಡಿದೆಬ್ಬಿಸುವಂಥ ಕಥಾನಕವದು. "ಮಣೆಗಾರ" ಪ್ರೊಸಿನಿಯಂಗಿಂತ ಆಪ್ತರಂಗಭೂಮಿಗೆ ಸೂಕ್ತವಾದ ವಸ್ತು. ಪ್ರಯೋಗ ಒಟ್ಟಾರೆ ಮನುಷ್ಯ ಬದುಕಿನ ನಡುವಿರುವ ಗ್ರೇ ಏರಿಯಾವೊಂದರ ದರುಶನ ಮಾಡಿಸಿತು. ಮೇಲ್ವರ್ಗ ಸಹಮಾನವರನ್ನು ಅದು ಹೇಗೆ ಅಸ್ಪೃಶ್ಯರು ಎಂದು ದೂರಕ್ಕಿಟ್ಟಿತ್ತು, ಶಿಕ್ಷಣದಿಂದ ವಂಚಿತರನ್ನಾಗಿಸುತ್ತಿತ್ತು ಎನ್ನುವುದು ಇದರ ಮೂಲ ಸಂಕಟ. ಇಡೀ ನಾಟಕದಲ್ಲಿ ಬದುಕಿಗಾಗೇ ಸಂಘರ್ಷವಿದೆ. ಆಹಾರಕ್ಕಾಗಿ ಹಾಹಾಕಾರವಿದೆ. socio-cultural  ನೆಲೆಯಲ್ಲಿ ದೊಡ್ಡ ಸಂಘರ್ಷವಿದೆ. ಇದು ರಾಜಕೀಯ ಆಯಾಮದಲ್ಲೂ ಬಹುಮುಖ್ಯವಾದ ಸಂಘರ್ಷವೇ. ಶಿಕ್ಷಣ ಮತ್ತು ಅದರ ಆಧಾರದಲ್ಲಿ ಹುಟ

"ಬದುಕು-ಬಯಲು" ನಾಟಕ ಮತ್ತು ಮಾನವೀಯ ನೆಲೆಯ ಹುಡುಕಾಟ

ಫ್ರಾನ್ಸ್ ನ ಬರಹಗಾರ ಅಲ್ಫ್ರೆಡ್ ಜೆರಿ ಬರೆದ 'ದಿ ಸೂಪರ್ ಮೇಲ್' ಎನ್ನುವ ಕಾದಂಬರಿಯ ಪ್ರೊಟಗಾನಿಸ್ಟ್ ಆ್ಯಂಡ್ರಿ ಮಾರ್ಕೆಲ್ ಒಬ್ಬ ಜಂಟಲ್ ಮನ್, ವಿಜ್ಞಾನಿ ಕೂಡ. ಅವನಿಗೆ ಮಾನವ ಸಾಮರ್ಥ್ಯಕ್ಕೆ ಮಿತಿ ಎಂಬುದೇ ಇಲ್ಲ ಎನ್ನುವುದರಲ್ಲಿ ಬಲವಾದ ನಂಬಿಕೆ. ಆತ ಉಗಿಬಂಡಿ ಜತೆಗೂ ಯಾವುದೇ ವಿಶ್ರಾಂತಿ ಮತ್ತು ತ್ರಾಸಿಲ್ಲದೇ ಕ್ರಮಿಸಿ  ರೇಸ್ ಗೆಲ್ಲಬಲ್ಲ (ಕಾದಂಬರಿಯಲ್ಲಿ ರೈಲು ಮತ್ತು ಸೈಕ್ಲಿಸ್ಟ್ ನಡುವೆ ಒಂದು ರೇಸ್ ನಡೆಯುತ್ತದೆ). ಒಂದೇ ಹೆಂಗಸಿನ ಜತೆ 24 ಗಂಟೆಗಳಲ್ಲಿ 82 ಬಾರಿ ಸಂಭೋಗ ನಡೆಸಬಲ್ಲ 'ಕಾಮಪಟುತ್ವ'ದ ಸಾಹಸಗಳನ್ನೂ ಮಾಡಬಲ್ಲ. ಇದನ್ನು ಪುರುಷಪರಾಕ್ರಮದ ನೆಲೆಯಲ್ಲಿ ನೋಡೋದಾ? ಇಲ್ಲಾ ನಿಸರ್ಗ ಸಹಜ ಸಾಧ್ಯತೆಯ ನೆಲೆಯಲ್ಲಿ ನೋಡುವುದಾ?... - ಇದು ಒಂದು ರೀತಿಯ ವಿಕ್ಷಿಪ್ತ ಮನೋಧರ್ಮದ, ಸೈನ್ಸ್ ಫಿಕ್ಷನ್ ಕಾದಂಬರಿಯ ಸಂಕ್ಷಿಪ್ತ ನೋಟ. ಅಲ್ಫ್ರೆಡ್ ಜೆರಿ ಉತ್ತಮ ನಾಟಕಕಾರನೂ ಹೌದು. ಆತನ 'ಉಬು ರೊಯ್' ಹೆಸರಾಂತ ನಾಟಕಗಳಲ್ಲೊಂದು.    * * * ಜೆರಿ ಬಗ್ಗೆ ಓದುತ್ತಿದ್ದ ಹೊತ್ತಲ್ಲಿ ಹಿಜಡಾವೊಬ್ಬರ ಆತ್ಮಕಥನ ಆಧರಿಸಿದ "ಬದುಕು-ಬಯಲು" ಎನ್ನುವ ನಾಟಕ ವೀಕ್ಷಣೆಗೆ ತಿಪಟೂರಿನ ರಂಗ ಗೆಳೆಯ ನೀನಾಸಂ ಚಂದ್ರು ಆಹ್ವಾನ ನೀಡಿದರು.  ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕ ನೋಡಿದೆ. ಅದಕ್ಕೂ ಮುಂಚೆ ನಾಟಕದ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಿ.ಎಸ್. ದ್ವಾರಕಾನಾಥ್, ಗೌರಿ ಲಂಕೇಶ್ ಮತ್ತಿತರ ಚಿಂತಕರ ವಿ