ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್ 1, 2011 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಏಯ್ ಧೀರ ಅಮ್ಮನಿಗೊಂದು ಸೆಲ್ಯೂಟ್ ಹೊಡಿಯೋ, ನನ್ನ ಪರವಾಗಿ...

ಕಳೆದೆರಡು ದಿನ ಇಲ್ಲಿ ಜೀವ ಸಣ್ಣಗೆ ನಡುಗುತ್ತಿತ್ತು. ಹೆರಿಗೆಯ ನೋವುಗಳಲ್ಲಿ ಹೆಣ್ಣುಜೀವವೊಂದು ಚಡಪಡಿಸುತ್ತಿತ್ತು, ಬಿಕ್ಕುತ್ತಿತ್ತು, ಹೊಸ ಜೀವಕ್ಕೊಂದು ಜನ್ಮ ಕೊಡುವುದು ತಮಾಷೆಯಾ... ಮನೆ ತುಂಬ ನಂಬುಗೆಯ ದೀಪಗಳನ್ನಿಟ್ಟು ಹಾರೈಸಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ದೆವು. ಕಾತರದಿಂದ ಕಾಯುತ್ತಿದ್ದ ಕ್ಷಣ ಬರುತ್ತಿದ್ದಂತೆ ಅವಕ್ಕೂ ಜೀವ ಬಂತು. ದೀಪಗಳು ಬೆಳಗತೊಡಗಿದವು. ನನ್ನವ್ವ ಮಾಡಿದ ಸಿಹಿ ಘಮ ಘಮಸತೊಡಗಿತು. ಅಮ್ಮನ ಒಡಲಿಂದ ಹೊರ ಬರುವ ಮುನ್ನ ಅವಳ ಲೋಕದಲ್ಲಿ ಬೆಚ್ಚಗಿದ್ದವ, ಈಗ ನಾರ್ವೆ ಚಳಿಗೆ ತೆರಕೊಂಡುಬಿಟ್ಟ. ಒಂಬತ್ತು ತಿಂಗಳು ಒಂಬತ್ತು ದಿನ ಒಡಲಲ್ಲೇ ಅದಾವ ಲೋಕ ಕಂಡನೋ, ಅದೆಷ್ಟು ಪ್ರೀತಿ ಉಂಡನೋ ಹೊರಕ್ಕೆ ಬರಲು ಒಲ್ಲೆ ಎನ್ನುವಂತೆ ವರ್ತಿಸಿದ. ವೈದ್ಯರು ಕೊಟ್ಟ ತಾರೀಕು ನವೆಂಬರ್ 24, 30... ಎಲ್ಲ ಕಳೆದುಹೋದವು. ವರ್ಷದ ಕ್ಯಾಲೆಂಡರ್  ಕಡೆಯ ತಿಂಗಳ ಹಾಳೆ ಬದಲಿಸುವುದಕ್ಕೆ ಇವನೇ ಬೇಕಿದ್ದನೆನ್ನುವಂತೆ ಹೊಸ ಜಗತ್ತಿಗೆ ದುತ್ತನೇ ಬಂದು ನಿಂತ. ಎಲಾ ಕಿಲಾಡಿ! ಆಗಲೇ ಹೊಕ್ಕಳುಹುರಿ ಕತ್ತರಿಸ ಹೊರಟ ವೈದ್ಯರ ಕತ್ತರಿ ಹಿಡಿಯನ್ನೆ ಗಟ್ಟಿ ಹಿಡಿದುಕೊಂಡಿದ್ದನಂತೆ! ಆ ಸಂದರ್ಭದಲ್ಲಿ ಅವರಪ್ಪ ಅಲ್ಲೇ ಇದ್ದರು. ವೈದ್ಯರ ತಂಡವೆಲ್ಲ ನಕ್ಕಿದ್ದೇ ನಕ್ಕಿದ್ದಂತೆ. ಆಸ್ಪತ್ರೆಯೊಳಗೆ ನನ್ನ ತಂಗಿಯನ್ನು ಕಾಣಲಾಗಲಿಲ್ಲ. ಒಳಕ್ಕೆ ಬಿಡಲಿಲ್ಲ. ಗಂಡನ ಬಿಟ್ಟರೆ ಅವಳ ಬಳಿ ಯಾರೂ ಇರುವಂತಿಲ್ಲ ಇಲ್ಲಿ. ಇಷ್ಟು ದಿನ ಇಲ್ಲಿ ಇದ್ದು ಅವಳ ಹೆರಿಗೆಯ ಮುಂಚೆ