ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

'ನಾರ್ವೆ ರಾಜಕುಮಾರ' ಬೆಂಗಳೂರಿಗೆ ಬಂದ ಹೊತ್ತು!

ಹೊಕ್ಕಳುಹುರಿ ಕತ್ತರಿಸ ಹೊರಟ ಡಾಕ್ಟರ್ ಕತ್ತರಿಯನ್ನೇ ಗಟ್ಟಿಯಾಗಿ ಹಿಡಿದುಕೊಂಡ ಕೈಗಳಿವು! ಈ ಪೋರ ಜಗತ್ತಿಗೆ ಕಣ್ಬಿಟ್ಟು ಮೂರೇ ಮೂರು ತಾಸಾಗಿತ್ತು. ಆಗಲೇ ಇವನ ದರ್ಶನ ಮಾಡಿದ್ದೆ. ಇದೇ ಕೈಗಳನ್ನು ಅಭಿಮಾನದಿಂದ ಹಿಡಿದಿದ್ದೆ. ಇವು ಅಂತಿಂಥ ಕೈಗಳಲ್ಲ. ಹೊಕ್ಕಳುಹುರಿ ಕತ್ತರಿಸ ಹೊರಟಿದ್ದ ವೈದ್ಯರ ಕತ್ತರಿಯನ್ನೇ ಬಿಗಿಯಾಗಿ ಹಿಡಿದು ತನ್ನ ತಾಯ ಒಡಲಿನ ಪ್ರೀತಿ, ಬೆಚ್ಚಗಿನ ಭಾವಕ್ಕೆ ತನ್ನ ಜೀವನಿಷ್ಠೆಯನ್ನು ಸಾರಿ ಕಣ್ತೆರೆದ ಭೂಪನ ಕೈಗಳಿವು.   ಬೆಂಗಳೂರು ಇಂಟರನ್ಯಾಷನ್ ಏರಪೋರ್ಟಿನಲ್ಲಿ ಮೊನ್ನೆ ಬಂದಿಳಿದ ಈ ನಾರ್ವೆ ರಾಜಕುಮಾರ ನನ್ನ ಕುತೂಹಲದಿಂದ ದುರುಗುಟ್ಟುತ್ತಲೇ ಇದ್ದ. ಯಾಕೋ, ಅದೇನು ಹಂಗೆ ನೋಡ್ತಿಯಾ ಅಂದೆ. ನೀನೇ ಅಲ್ವಾ ನನ್ನ ಅಮ್ಮನ ಮಡಿಲಿಂದ ಹೊರಬಂದ ದಿನ ನೋಡಿ ಕೈ ಹಿಡಿದು ಅಮ್ಮನಿಗೊಂದು ಸೆಲ್ಯುಟ್ ಹೊಡಿಯೊ ನನ್ನ ಪರವಾಗಿ ಅಂದಿದ್ದು... ಎನ್ನುವಂತೆ ದುರುಗುಟ್ಟಿ ಹಂಗೇ ತುಟಿಯರಳಿಸಿದ. ಏರ್ ಪೋರ್ಟಿನಲ್ಲಿ  ಮೊನ್ನೆ ಇವನ ರಿಸೀವ್ ಮಾಡಲು ಅದೆಷ್ಟು ತಾಸಿನಿಂದ ಕಾದಿದ್ದೆವು.  ನಮ್ಮೆಲ್ಲರನ್ನು ನೋಡಿ ಒಮ್ಮೆ ನಕ್ಕ. ನನ್ನ ನೋಡಿದವನೇ ದುರುಗುಟ್ಟುತ್ತಲೇ ಇದ್ದ. ಒಂದಷ್ಟು ನಗು, ಅಳು...  ನಾರ್ವೆಯಿಂದ ನಾನು ಮರಳಿ ಬರುವ ದಿನವೇ ಇವನ ಜನನವಾಗಿತ್ತು. ಆಸ್ಪತ್ರೆಯಲ್ಲಿ ಕಾದು ಇವನ ದರ್ಶನ ಮಾಡಿಕೊಂಡು ಬಂದಿದ್ದೆ. ಇವನ ತಾಯಿ ಅಂದರೆ ನನ್ನ ತಂಗಿಯನ್ನು ಭೇಟಿ ಮಾಡಿ ಶುಭಾಶಯ ಹೇಳುವುದಕ್ಕೆ ಅವತ್ತು ಅವಕಾಶವಿರಲಿಲ್ಲ. ರಾತ್ರಿ

ವಾಚ್ ಕೊಟ್ಟ ಮಾಮನ ಸಮಯ ನಿಂತುಹೋದ ಹೊತ್ತು...

ನಾನಿನ್ನೂ ಸ್ಕೂಲ್ ನಲ್ಲಿ ಓದುತ್ತಿದ್ದೆ. ಕೈಗೆ ಇಂಪೋರ್ಟೆಡ್ ಕ್ಯಾಸಿಯೊ ವಾಚ್ ಕಟ್ಟುತ್ತಿದ್ದೆ. ಅದರಲ್ಲಿ ಏಳು ಬಗೆಯ ಮ್ಯುಜಿಕಲ್ ಅಲಾರಾಂ ಇತ್ತು. ನನ್ನ ಜನ್ಮದಿನದಂದು ಅದು ಹ್ಯಾಪಿ ಬರ್ತಡೇ ಸಂಗೀತ ಹೇಳುತ್ತಿತ್ತು. ಬರ್ತಡೇ ದಿನ ತಾಸಿಗೊಂದು ಬಾರಿ ಇಡೀ ದಿನ ಅಲಾರಾಂ ಮೊಳಗುವಂತೆ ಮಾಡಬಲ್ಲ ವ್ಯವಸ್ಥೆ ಅದರಲ್ಲಿತ್ತು. ನನ್ನ ಓರಿಗೆಯ ಹುಡುಗರಲ್ಲಿ ಅದು ಮೂಡಿಸಿದ ಕುತೂಹಲ ಅಷ್ಟಿಷ್ಟಲ್ಲ. ಓದುತ್ತಿದ್ದ ಸ್ಕೂಲಿನಿಂದ ಹಿಡಿದು ಇಡೀ ಸುತ್ತಮುತ್ತಲಿನ ಜನಕ್ಕೂ ನಾನೊಂದು ಸ್ಪೆಶಲ್ ಪರ್ಸನ್ ಆಗಿಬಿಟ್ಟಿದ್ದೆ. ಬಟನ್ ಒತ್ತಿದರೆ ಒಂದು ಸಣ್ಣ ಟಾರ್ಚಿನಷ್ಟು ಬೆಳಕು ಮೂಡುತ್ತಿತ್ತು. ರಾತ್ರಿ ಕರೆಂಟ್ ಹೋದಾಗ ಒಳ್ಳೆ ಓದುವ ಧಿಮಾಕು ತೋರಿಸುವಂತೆ ವಾಚ್ ಹಿಡಿದುಕೊಂಡು ಓದುವ ಸಾಹಸ ಮಾಡುತ್ತಿದ್ದೆ.   ಆ ವಾಚು ನನ್ನ ಕಾಲೇಜು ದಿನಗಳವರೆಗೂ ಇತ್ತು. ಕೆಲ ಗೆಳೆಯರು ಎಲ್ಲಾದರೂ ಊರಿಗೆ ಹೋಗುವುದಿದ್ದರೆ ನನ್ನ ವಾಚ್ ಕಟ್ಟಿಕೊಂಡೇ ಹೋಗುತ್ತಿದ್ದರು. ಅದೆಷ್ಟು ಜನರ ಮುಂದೆ ಮ್ಯುಜಿಕಲ್ ಖುಷಿ ಮೂಡಿಸಿತೋ! ಅದರ ಸೆಲ್ ಒಮ್ಮೆ ಖಾಲಿಯಾಯ್ತು. ಅದಕ್ಕಾಗಿ ನಾನು ಪರಿದಾಡಿದ್ದು ಅಷ್ಟಿಷ್ಟಲ್ಲ. ಆಗಷ್ಟೇ ಕ್ವಾರ್ಟ್ಜ ವಾಚುಗಳು ದೇಶಕ್ಕೆ ದಾಂಗುಡಿ ಇಡುತ್ತಿದ್ದವು. ಕಡೆಗೆ ಅದರ ಸೆಲ್ ಬೆಳಗಾವಿಯಲ್ಲಿ ಸಿಕ್ಕಿತು. ಆಗ ಅದು ದುಬಾರಿಯಾಗಿತ್ತು. ಆರಂಭದ ಕೆಲ ವರ್ಷಗಳತನಕ ಸೆಲ್ ಡೌನ್ ಆಗೇ ಇರಲಿಲ್ಲ. ಆನಂತರದಲ್ಲಿ ಹತ್ತಾರು ಬಾರಿ ಸೆಲ್ ಚೇಂಜ್ ಮಾಡಿದೆ. ಮ್ಯುಜ