ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಆಗಸ್ಟ್, 2012 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

'ನಾರ್ವೆ ರಾಜಕುಮಾರ' ಬೆಂಗಳೂರಿಗೆ ಬಂದ ಹೊತ್ತು!

ಹೊಕ್ಕಳುಹುರಿ ಕತ್ತರಿಸ ಹೊರಟ ಡಾಕ್ಟರ್ ಕತ್ತರಿಯನ್ನೇ ಗಟ್ಟಿಯಾಗಿ ಹಿಡಿದುಕೊಂಡ ಕೈಗಳಿವು! ಈ ಪೋರ ಜಗತ್ತಿಗೆ ಕಣ್ಬಿಟ್ಟು ಮೂರೇ ಮೂರು ತಾಸಾಗಿತ್ತು. ಆಗಲೇ ಇವನ ದರ್ಶನ ಮಾಡಿದ್ದೆ. ಇದೇ ಕೈಗಳನ್ನು ಅಭಿಮಾನದಿಂದ ಹಿಡಿದಿದ್ದೆ. ಇವು ಅಂತಿಂಥ ಕೈಗಳಲ್ಲ. ಹೊಕ್ಕಳುಹುರಿ ಕತ್ತರಿಸ ಹೊರಟಿದ್ದ ವೈದ್ಯರ ಕತ್ತರಿಯನ್ನೇ ಬಿಗಿಯಾಗಿ ಹಿಡಿದು ತನ್ನ ತಾಯ ಒಡಲಿನ ಪ್ರೀತಿ, ಬೆಚ್ಚಗಿನ ಭಾವಕ್ಕೆ ತನ್ನ ಜೀವನಿಷ್ಠೆಯನ್ನು ಸಾರಿ ಕಣ್ತೆರೆದ ಭೂಪನ ಕೈಗಳಿವು.   ಬೆಂಗಳೂರು ಇಂಟರನ್ಯಾಷನ್ ಏರಪೋರ್ಟಿನಲ್ಲಿ ಮೊನ್ನೆ ಬಂದಿಳಿದ ಈ ನಾರ್ವೆ ರಾಜಕುಮಾರ ನನ್ನ ಕುತೂಹಲದಿಂದ ದುರುಗುಟ್ಟುತ್ತಲೇ ಇದ್ದ. ಯಾಕೋ, ಅದೇನು ಹಂಗೆ ನೋಡ್ತಿಯಾ ಅಂದೆ. ನೀನೇ ಅಲ್ವಾ ನನ್ನ ಅಮ್ಮನ ಮಡಿಲಿಂದ ಹೊರಬಂದ ದಿನ ನೋಡಿ ಕೈ ಹಿಡಿದು ಅಮ್ಮನಿಗೊಂದು ಸೆಲ್ಯುಟ್ ಹೊಡಿಯೊ ನನ್ನ ಪರವಾಗಿ ಅಂದಿದ್ದು... ಎನ್ನುವಂತೆ ದುರುಗುಟ್ಟಿ ಹಂಗೇ ತುಟಿಯರಳಿಸಿದ. ಏರ್ ಪೋರ್ಟಿನಲ್ಲಿ  ಮೊನ್ನೆ ಇವನ ರಿಸೀವ್ ಮಾಡಲು ಅದೆಷ್ಟು ತಾಸಿನಿಂದ ಕಾದಿದ್ದೆವು.  ನಮ್ಮೆಲ್ಲರನ್ನು ನೋಡಿ ಒಮ್ಮೆ ನಕ್ಕ. ನನ್ನ ನೋಡಿದವನೇ ದುರುಗುಟ್ಟುತ್ತಲೇ ಇದ್ದ. ಒಂದಷ್ಟು ನಗು, ಅಳು...  ನಾರ್ವೆಯಿಂದ ನಾನು ಮರಳಿ ಬರುವ ದಿನವೇ ಇವನ ಜನನವಾಗಿತ್ತು. ಆಸ್ಪತ್ರೆಯಲ್ಲಿ ಕಾದು ಇವನ ದರ್ಶನ ಮಾಡಿಕೊಂಡು ಬಂದಿದ್ದೆ. ಇವನ ತಾಯಿ ಅಂದರೆ ನನ್ನ ತಂಗಿಯನ್ನು ಭೇಟಿ ಮಾಡಿ ಶುಭಾಶಯ ಹೇಳುವುದಕ್ಕೆ ಅವತ್ತು ಅವಕಾಶವಿರಲಿಲ್ಲ. ರಾತ್ರಿ