ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್ 30, 2013 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಮಲೆಗಳಲ್ಲಿ ಮದುಮಗಳು: ಅದ್ಭುತ ರಂಗಾನುಭವ! ಆದರೆ.....

ಕನ್ನಡದ ಮಹಾಕಾದಂಬರಿ  "ಮಲೆಗಳಲ್ಲಿ ಮದುಮಗಳು" (ರಚನೆ: ಕುವೆಂಪು)  ಅಕ್ಷರಶಃ ಜೀವಪಡಕೊಂಡು ರಾತ್ರಿಯಿಡೀ ಬದುಕುವ ರಂಗಭಾಗ್ಯ ಪಡಕೊಂಡಿದೆ. ಮೊದಲಿಗೆ ಮೈಸೂರು ಮತ್ತೀಗ ಬೆಂಗಳೂರು ರಂಗಾಸಕ್ತರಿಗೆ ಈ ಮದುಮಗಳು ಹಲವಾರು ರಾತ್ರಿಗಳನ್ನೂ ಕರುಣಿಸಿದ್ದಾಳೆ. ಭಾರತೀಯ ರಂಗಭೂಮಿ ಇತಿಹಾಸದಲ್ಲಿ ಕಾದಂಬರಿಯೊಂದು ಇಷ್ಟು ಅದ್ದೂರಿ ರಂಗರೂಪ ಕಂಡಿದ್ದು ಬಹುಶಃ ಇದೇ ಮೊದಲಿರಬೇಕು. "ಮಲೆಗಳಲ್ಲಿ ಮದುಮಗಳು" ಹೆಸರಾಂತ ರಂಗಕರ್ಮಿ ಸಿ. ಬಸವಲಿಂಗಯ್ಯ ಅವರ ಮಹತ್ವಾಕಾಂಕ್ಷೆಯ ರಂಗಸಾಹಸ. ಗಮನಾರ್ಹ ರಂಗಪ್ರಯೋಗ. ಪ್ರಯೋಗದಲ್ಲಿ ಬಹುವಾಗಿ ಸೆಳೆಯುವುದು ರಂಗವಿನ್ಯಾಸ (ವಿನ್ಯಾಸ: ದ್ವಾರ್ಕಿ). ಮಲೆನಾಡಿನ ಒಂದು ಭಾಗವನ್ನೇ ಪುನರ್ ಸೃಷ್ಟಿ ಮಾಡಿದ್ದು ವಿನ್ಯಾಸದ ವಿಶೇಷತೆ. ನಾಟಕದ ಜೀವಾಳವೇ ಈ ರಂಗವಿನ್ಯಾಸ ಎಂದರೆ ತಪ್ಪಲ್ಲ. ಒಟ್ಟಾರೆ ಕಥೆಯ ಮೂಡ್ ಸೃಷ್ಟಿಯಾಗೋದೇ ಮಲೆನಾಡಿನ ಪರಿಸರದಿಂದ. ಪಾತ್ರಗಳನ್ನು ಇದರಿಂದ ಹೊರಕ್ಕಿಟ್ಟರೆ ಕಥೆಯೇ ನೀರಸ. ಹೀಗಾಗಿ ರಂಗದ ಮೇಲೆ ಕಾದಂಬರಿ ತರಲು ಇಂಥ ಪರಿಸರದ ಮರುಸೃಷ್ಟಿಯ ಸಾಹಸ ಅನಿವಾರ್ಯ. ಕಥೆಯ ಓಘ ಮತ್ತು ಅದು ಬಯಸುವ ಪರಿಸರ, ಆಯಾ ಮೂಡ್ ಗೆ ತಕ್ಕಂಥ ರಂಗಸಜ್ಜಿಕೆ ಅದ್ಭುತವೇ ಸರಿ.  ಒಟ್ಟು ರಂಗವನ್ನು ನಾಲ್ಕು ಸ್ಥಳಗಳಲ್ಲಿ ವಿಂಗಡಿಸಿಕೊಳ್ಳಲಾಗಿದೆ.  ಕಥೆಯ ಒಂದು ಭಾಗ ಮೊದಲ ರಂಗಸಜ್ಜಿಕೆಯಲ್ಲಿ ಕೊನೆಗೊಂಡರೆ ಮುಂದಿನದು ಮಿಕ್ಕ ರಂಗಸಜ್ಜಿಕೆಗಳಲ್ಲಿ... ಹೀಗೆ ದೃಶ್ಯಗಳು ವಿವಿಧ ರಂಗ