ವಿಷಯಕ್ಕೆ ಹೋಗಿ

ಪರ್ದಾ ನಹೀ ಜಬ್ ಕೋಯೀ ಖುದಾ ಸೇ,..


ಅವಳು ನಖಾಬ್ (ಬುರ್ಖಾ) ಧರಿಸುತ್ತಾಳೆ. ನೆಲ ನೋಡುತ್ತ ಸಾಗುತ್ತಾಳೆ. ಸಂಪರ್ಕಕ್ಕೆ ಬಂದ ಎಲ್ಲರೊಂದಿಗೆ ಖುಷಿಯಿಂದ ಮಾತನಾಡುತ್ತಾಳೆ. ಮನೆಗೆ ಸಂತೆ, ಹಾಲು ... ಎಲ್ಲ ಅವಳೇ ತರುತ್ತಾಳೆ. ಮಾರ್ಕೆಟ್‌, ಅಂಗಡಿ ಅಲೆದಾಡಿ. ಸಬ್ಜಿ ಮಂಡಿಯಲ್ಲಿ ಕಾಯಕಕ್ಕೂ ಹೋಗುತ್ತಾಳೆ.
ಅವಳ ಶೋಹರ್‌ (ಗಂಡ)  ಗಡ್ಡ ನೆರೆತಿದೆ. ಶುಭ್ರ ಮತ್ತು ಸ್ವಚ್ಛ ಜುಬ್ಬಾ, ಪೈಜಾಮು ಮತ್ತು ತಲೆ ಮೇಲೊಂದು ಗೋಲ್‌ ಟೋಪಿ, ಸದಾ ನಗುಮುಖ ಹೊತ್ತ ಷರೀಫ್‌ ಆದಮಿ. ಅವಳು ಅವನನ್ನು ತುಂಬ ಜತನದಿಂದ ನೋಡಿಕೊಳ್ಳುತ್ತಾಳೆ. ಊಟ, ಬಟ್ಟೆ ಮತ್ತು ಬಹುಶಃ ಮೊಹಬ್ಬತ್‌ ... ಇದಾವುದರಲ್ಲೂ ಕಮ್ಮಿ ಮಾಡಿಲ್ಲ ಎನ್ನುವುದು ಅವನ ಪ್ರಶಾಂತ ಮತ್ತು ಟೆನ್ಶನ್‌ ಮುಕ್ತ ನಗುಮುಖದಿಂದಲೇ ತಿಳಿಯುತ್ತದೆ.
ಫಜರ್‌ ನಮಾಜಿಗೆ ಅವನ ಕೈಹಿಡಿದು ಮಸೀದಿ ಬಾಗಿಲವರೆಗೂ ಕರೆತರುತ್ತಾಳೆ. ಅವನು ನಮಾಜು ಮುಗಿಸಿ ಬರುವವರೆಗೆ ಮಸೀದಿ ಗೇಟ್‌ ಬಳಿ, ನಡುಗುವ ಚಳಿಯಲ್ಲಿ ಬುರ್ಖಾದೊಳಗೆ ಅವುಚಿ ಕುಳಿತುಕೊಳ್ಳುತ್ತಾಳೆ. ರಾತ್ರಿ ಈಶಾ ನಮಾಜಿಗೂ ಹಾಗೆಯೇ. ಅವನು ನಮಾಜು ಮುಗಿಸಿ ಬಂದೊಡನೆ ದುವಾ ಮಾಡಿ ಅವಳ ತಲೆ ನೇವರಿಸುತ್ತಾನೆ. ಮತ್ತೆ ಅವಳು ಅವನ ಕೈಹಿಡಿದು ಜೋಪಡಿಯತ್ತ ಸಾಗುತ್ತಾಳೆ.
ಅವನು ಹುಟ್ಟು ಕುರುಡ. ಅವಳು ಅವನ ಕಣ್ಣಬೆಳಕು!
ಅಲ್ಲಾಹು, ಅವನ ರಸೂಲ್‌ ಮೊಹಮ್ಮದರು, ಆಯೇಷಾ ಮತ್ತು ಈಮಾನ್ ಮನುಷ್ಯ ಬದುಕಿನಲ್ಲಿ ಬಾಳುತ್ತಿರುವುದು ಕಾಣಿಸುತ್ತದೆ.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಷ್ಕ್‌ ಕೆ ಇಮ್ತೆಹಾನ್‌ ಔರ್‌ ಭೀ ಹೈ’.. ಇಮ್ರಾನ್‌ ಖಾನ್‌!

ಪಾಕಿಸ್ತಾನದ ಬಗ್ಗೆ ಮಾತನಾಡುವುದು ಮಹಾ ಪಾಪದ ಕೆಲಸವೇನಲ್ಲ. ಹಾಗೆ ಭಾವಿಸಬೇಕಿಲ್ಲ. ಅದು ಒಪ್ಪಿತವೊ ಇಲ್ಲವೋ, ಅದರ ಬಗ್ಗೆ ಅಲಕ್ಷ್ಯವೋ ನಿರ್ಲಕ್ಷ್ಯವೊ ಏನೇ ಆದರೂ ಅದು ಒಂದು ದೇಶ. ನೆರೆಯ ರಾಷ್ಟ್ರ. ‘ಪಡೋಸಿ...’ ಸಂಬಂಧದಲ್ಲಿ ನಮ್ಮದೇ ಕರುಳಬಳ್ಳಿ. ಭಾಷೆ, ಜನಜೀವನ ಶೈಲಿಯಲ್ಲಿ ಬದಲಾದರೂ ಮನುಷ್ಯ ಭಾವ, ಬದುಕುವ ಸಾಮಾನ್ಯ ಕಾಳಜಿ  ಒಂದೇ. ಹಾಗೆ ನೋಡಿದರೆ ಸಾಂಸ್ಕೃತಿಕವಾಗಿ ಎರಡೂ ದೇಶಗಳು ಅಭಿನ್ನ. ನಮ್ಮಲ್ಲಿರುವ ಹಾಗೆ ಅಲ್ಲಿಯೂ ಪ್ರಜಾಪ್ರಭುತ್ವ ಇದೆ. ಅಲ್ಲಿ ನಡೆಯುವುದು ಇಲ್ಲೂ ನಡೆಯುತ್ತದೆ. ಅಲ್ಲಿ ನಡೆಯಲೇಬಾರದ್ದು ಇಲ್ಲೂ ನಡೆಯಲೇಬಾರದು.  ತೀವ್ರವಾದ ನಮ್ಮಲ್ಲಿನದಕ್ಕಿಂತ ಅಲ್ಲಿ ತುಸು ಹೆಚ್ಚು ಸವಾರಿಗೆ ಹವಣಿಸಿದೆ. ಅಲ್ಲಿನ ಮಿಲಿಟರಿ ಅತಿರೇಕದ್ದು. ಅಕ್ಷಮ್ಯ. ಮತ್ತೆ ದೇಶ ಪುಟ್ಟದಾದಷ್ಟು ಅದಕ್ಕೆ ಭಯಗಳು ಜಾಸ್ತಿ. ಮಿಲಿಟರಿ ಕವಚದಲ್ಲಿ ಅದು ಸುರಕ್ಷಾ ಭಾವವನ್ನು ಕಲ್ಪಿಸಿಕೊಳ್ಳುತ್ತದೆ. ಅದೊಂದು ತರಹದ ಸಮಾಧಾನ. ಆದರೆ ಭ್ರಮೆಯಿಂದ ಕೂಡಿದ್ದು. ಭಯೋತ್ಪಾದನೆ ಕೂಡ ಒಂದರ್ಥದಲ್ಲಿ ಪುಕ್ಕಲುತನವೇ ಆಗುತ್ತದೆ. ಹಿಂಸಾ ಪ್ರವೃತ್ತಿಗೆ ಹೆದರಿಸುವುದೇ ಕೆಲಸ. ಹೆದರಿಸುವವರು ಶೂರರು, ಧೀರರು ಮತ್ತು ಜೀನಿಯಸ್‌ ಆಗಿರಲು ಹೇಗೆ ಸಾಧ್ಯ? ಮುಖ್ಯವಾಗಿ ಅಲ್ಲಿನ ವಿದ್ಯಮಾನಗಳನ್ನು ಗಮನಿಸುವುದಾದರೆ, ಮಿಲಿಟರಿ, ಮತಾಂಧರು, ಭಯೋತ್ಪಾದಕರು, ಭ್ರಷ್ಟರು ಇದೆಲ್ಲದರಿಂದ ಪಾಕಿ ತುಂಬ ರೋಸಿ ಹೋಗಿದ್ದಾನೆ. ಒಂದು ಸೂಕ್ತ ಪರ್ಯಾಯಕ್ಕಾಗಿ ಹಂಬಲಿಸಿದ್...

ನಾನು ನೀನಾಸಂ ಪದವೀಧರನಲ್ಲ...

ನೀನಾಸಂ ಪದವಿ ನನ್ನ ತಲೆಗೆ ಅನಗತ್ಯ ಭಾರ ಸ್ವಾಮೀ. ಅಷ್ಟು ಕಪ್ಪು ಸುಂದರಿಯರ ಭಾರವೇ ನನ್ನ ತಲೆಗೆ ಸಾಕಾಗಿ ಹೋಗಿದೆ. ಇನ್ನು ಇಷ್ಟು 'ವಜನ್' ಪದವಿ ಕಿರೀಟ ಬೇಡವೇ ಬೇಡ. ಸುಮ್ಮನೇ ಖಾಸಗಿಯಾಗಿ ಡೈರಿಯ ಹಾಗೆ ಬೆಚ್ಚಗೆ ನನ್ನ ಜತೆಗೆ ಸದಾ ಇರಲಿ ಎಂದುಕೊಂಡು ಈ ಬ್ಲಾಗ್ ರೂಪಿಸಿದ್ದೇನಷ್ಟೇ. ಅವಧಿ ಬ್ಲಾಗ್ ನನ್ನ ಈ ಪುಟ್ಟ ಯತ್ನಕ್ಕೆ ಬೆನ್ನು ತಟ್ಟಿದ್ದು ಸಂತೋಷವೇ. ಆದರೆ, ನನ್ನ ಬಗ್ಗೆ ಬೆನ್ನುತಟ್ಟುವ ಸಾಲುಗಳ ಬರೆಯುತ್ತ ನೀನಾಸಂ ಪದವೀಧರ ಎನ್ನುವ ಒಂದು ತಪ್ಪು ಮಾಹಿತಿ ಕೂಡ ನುಸುಳಿಕೊಂಡಿದೆ. ಸ್ವಾಮೀ ನಾನೀ ನೀನಾಸಂ ಸುದ್ದಿಗೇ ಹೋದವನಲ್ಲ. ಅಲ್ಲಿ ಕಲಿತು ಬಂದವರ ಜತೆ 'ಬೇಜಾನ್' ಜಗಳ ಮಾಡಿದಿನಿ ಅಷ್ಟೇ.

ಕಲೆ ಮತ್ತು ನೈತಿಕತೆ

ಕಲಾವಿದನೊಬ್ಬನ ಕಲೆಯ ಬಗೆಗಿನ ಅನುರಾಗ, ಶ್ರದ್ಧೆ, ವಿಶ್ವಾಸಾರ್ಹತೆ ಮತ್ತು ಧ್ಯಾನ ಎಲ್ಲವೂ ಬದ್ಧತೆಯಿಂದ ಕೂಡಿರುತ್ತದೆ. ಅವನೊಳಗೇ ಒಂದು ಸ್ವರ್ಗ ಸಮಾನವಾದ ಜಗತ್ತೊಂದು ರೂಪುಗೊಂಡಿರುತ್ತದೆ. ಅದನ್ನು ಬೇಕಿದ್ದರೆ ಕಾವ್ಯದ  ಅಂತಃದೃಷ್ಟಿ, ಅಂತಃಪ್ರಜ್ಞೆ ಅಥವಾ ಅಂತಃ ಸೂಕ್ಷ್ಮತೆ ಅಂತ ಅನ್ನಿ. ಕಾವ್ಯ ಎಂದಾಕ್ಷಣ ಅಕ್ಷರಗಳ ಕಲಾಕೃತಿ ಅಲ್ಲ. ಕಾವ್ಯ ಅಥವಾ ಪೊಯಟ್ರಿ ಅನ್ನೋದು ಎಲ್ಲದರೊಳಗೂ ಇರುವ ಅವ್ಯಕ್ತ ಸೂಕ್ಷ್ಮ. ಅದನ್ನು ಅಭಿವ್ಯಕ್ತಿಸಲು ನಾವು ಕಂಡುಕೊಳ್ಳುವ ಮಾರ್ಗಗಳಲ್ಲಿ ಅಕ್ಷರ, ಶಬ್ದ, ಧ್ವನಿ, ಚಿತ್ರ, ಅಭಿನಯ.. ಎಲ್ಲವೂ ಒಂದು ಮಾಧ್ಯಮ. ಕಲಾವಿದ ಅಥವಾ ಕವಿ ತಾನು ಸೃಜಿಸಹೊರಟ ಕೃತಿಯಲ್ಲಿ ಇದೆಲ್ಲವನ್ನು ಪ್ರಯೋಗಕ್ಕೊಳಪಡಿಸಿ ಅದರ ಸಾರವನ್ನೇ ಅಭಿವ್ಯಕ್ತಿಯಲ್ಲಿ ಎರಕಹೊಯ್ಯುತ್ತಾನೆ. ಹಾಗಾದಾಗ ಆ ಕಲಾಕೃತಿಯಲ್ಲಿ ಧ್ವನಿಸುತ್ತಿರುವುದು ಅವನ ದೃಷ್ಟಿ, ಪ್ರಜ್ಞೆ, ತತ್ವ, ಅಭಿಪ್ರಾಯ ಆಗುತ್ತದೆ. ಇದಕ್ಕೂ ಮಿಗಿಲಾಗಿ ಅದು ಆತನ ಅನುಭಾವ ಪರಪಂಚವೇ ಆಗುತ್ತದೆ. ಪ್ರತಿನಿಧಿಸುವ ತತ್ವ ಅವನದೇ ಆಗಬಹುದು. ಅದಕ್ಕವನು ಬದ್ಧನೂ ಆಗಬಹುದು. ಇಲ್ಲವೇ ಅರಾಜಕತೆಯ ಹಾಗೊಂದು ಭಾವದಲ್ಲಿ ತನಗೂ ತನ್ನ ಕಲಾಕೃತಿಗೂ ಸಂಬಂಧವೇ ಇಲ್ಲ ಎಂದು ವಾದಿಸಬಹುದು. ಅರಾಜಕತೆಯಿಂದ ಕೂಡಿದ ಯಾವುದೂ ಬಹುಕಾಲ ಬಾಳಿ ಬದುಕುವಂಥದ್ದಲ್ಲ ಎನ್ನುವ ಎಚ್ಚರ ಕೂಡ ಮುಖ್ಯ.   ಮತ್ತೆ ಕಲಾವಿದನ ಅಭಿವ್ಯಕ್ತಿಯನ್ನು ಬರಿಯ ಸಾಂಸ್ಕೃತಿಕ ನೆಲೆಯಲ್ಲಿ ಮಾತ್ರ ಕಾಣಬೇಕಿಲ್ಲ. ಅದು ಸಮ...