ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜುಲೈ, 2017 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

MOM: ಹುಡುಗಿ ಅತ್ಯಾಚಾರ ಹಿಂಸೆಗೆ ತಾಯಿ ಪ್ರತಿಹಿಂಸೆ, ‘ಬಾಹ್ಯ ಪ್ರಚೋದನೆಗಳ’ ಮೇಲೆ ಆಕ್ರೋಶ

ತನ್ನ ಗಂಡನ ಮೊದಲ ಪತ್ನಿಯ ಮಗಳು ತನ್ನನ್ನು ಯಾವ ರೀತಿಯಲ್ಲೂ ತಾಯಿ ಎಂದು ಒಪ್ಪಿಕೊಳ್ಳದವಳು. ಅಂಥ ಮಗಳು ಸಾಮೂಹಿಕ ಅತ್ಯಾಚಾರಕ್ಕೆ ಒಳಗಾದಾಗ ತಾಯಿ ಸ್ಥಾನದಲ್ಲಿರುವ ಹೆಣ್ಣೊಬ್ಬಳ ಸ್ಪಂದನೆ ಹೇಗಿರಬಹುದು!  ತುಂಬ ಕಾಡಬಲ್ಲ ಪ್ರಶ್ನೆ ಇದು. ಮನುಷ್ಯ ಹುಟ್ಟು ಅವನ ಒಟ್ಟು ಬದುಕಿನ ಫಿಲಾಸಫಿ ಗಮನಿಸಿದರೆ ಹೊಳೆವ ಸತ್ಯಗಳಲ್ಲಿ ಇಷ್ಟನ್ನು ಈ ಕ್ಷಣಕ್ಕೆ ಹೆಕ್ಕಿಕೊಳ್ಳಬಹುದು.– ಎಲ್ಲ ಸಂಬಂಧಗಳು ಜೈವಿಕ ಆಧಾರದಲ್ಲಷ್ಟೇ ಗಟ್ಟಿಗೊಳ್ಳುವುದಿಲ್ಲ. ತನಗೆ ಹುಟ್ಟಿದ, ತನ್ನ ಜೊತೆ ರಕ್ತ ಹಂಚಿಕೊಂಡ ಜೀವಗಳಷ್ಟೇ ಮನುಷ್ಯ ಜೀವ ಎಂದುಕೊಂಡರೆ ಈ ಜೀವಸಂಬಂಧಕ್ಕೆ ಅರ್ಥವೇನು?  ಒಂದು ಜೀವ ಅಪಾಯಕ್ಕೊಳಗಾದರೆ, ತೊಂದರೆಗೊಳಗಾದರೆ, ಹಲ್ಲೆಗೊಳಗಾದರೆ ಮತ್ತೊಂದು ಜೀವ ಅದಕ್ಕೆ ಸ್ಪಂದಿಸುವುದೇ ನಿಜದ ಮಾನವೀಯತೆ. ಸಹಮಾನವರ ಜೊತೆ ಸಹಾನುಭೂತಿ, ಸಹಿಷ್ಣುತೆ, ಸ್ಪಂದನೆಯೇ ನಿಜದ ಮಾನವ ಧರ್ಮ.  ದ್ವೇಷ, ಮೋಹ, ಮತ್ಸರಗಳೆಲ್ಲವೂ ಮನುಷ್ಯ ಸಹಜವೇ. ಆದರೆ ಅವು ವಿಕೃತಿಗಿಳಿದಾಗಲೇ ಸಂಘರ್ಷ. ಅದರಿಂದ ಹುಟ್ಟುವ ಅಸಹಿಷ್ಣುತೆ, ಅಮಾನವೀಯ ನಡೆಗಳಿಂದಾಗಿ ಅನಾಹುತಗಳು ಸಂಭವಿಸುತ್ತವೆ. ಇದು ಮನುಷ್ಯನೊಳಗಣ ಜಗತ್ತು. ಸಂಘರ್ಷ. ಬಾಹ್ಯಕ್ಕಿಂತ ಆಂತರಿಕ ಪ್ರಚೋದನೆಗಳೇ ಇವಕ್ಕೆ ಮೂಲ. ರವಿ ಉದ್ಯಾವರ ಎನ್ನುವ ಉದಯೋನ್ಮುಖನ ನಿರ್ದೇಶನದ ಮತ್ತು ಖ್ಯಾತ ನಟಿ ಶ್ರೀದೇವಿ ಅಭಿನಯದ ‘ಮಾಮ್‌’ (MOM) ಚಿತ್ರವನ್ನು ಗೆಳೆಯ ಇಟ್ನಾಳ್‌ ಜೊತೆ ನೋಡಿದೆ. ಚಿತ್ರದ ಕೆಲ ಸನ್ನಿವೇಶಗಳು ನನ್ನೊಳಗಿನ ಮನುಷ್