ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಡಿಸೆಂಬರ್ 16, 2017 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

‘ಬಲ’ಗೊಳ್ಳುತ್ತಿರುವ ರಾಹುಲ್‌

ನೆಹರೂ ನೇತೃತ್ವದ ಕಾಂಗ್ರೆಸ್‌ ತೊರೆದ ಇಂದಿರಾ ಗಾಂಧಿ ಹೊಸ ಕಾಂಗ್ರೆಸ್‌ ಕಟ್ಟಿಕೊಂಡರು. ರಾಜೀವ್‌ ಅದನ್ನೇ ಮುಂದುವರಿಸಿದರು. ಇಬ್ಬರೂ ಕೊಲೆಯಾದರು. ಅಲ್ಲಿಯವರೆಗೂ ಭವ್ಯವಾಗಿದ್ದ ಕಾಂಗ್ರೆಸ್‌ ಎನ್ನುವ ಮಹಲಿಗೆ ಮುದಿ ರಾಜಕಾರಣಿಯೊಬ್ಬ ಹೊಕ್ಕುಬಿಟ್ಟ. ಧ್ವಂಸದ ಅಧ್ಯಾಯ ಆರಂಭಿಸಿ, ‘ಬಳು ಹೊಕ್ಕ ಮನೀ ಅಳು’ ಎನ್ನುವಂತೆ ಕಾಂಗ್ರೆಸ್‌ ಅವಸಾನಕ್ಕೆ ನಾಂದಿ ಹಾಡಿದ. ಅಲ್ಲಿಂದಾಚೆಗೆ ಕಾಂಗ್ರೆಸ್‌  ಶೈತಾನ್‌ ಹೊಕ್ಕ ಮಹಲ್‌ ಆಗಿತ್ತು. ಅಕ್ಷರಶಃ ಭೂತ ಬಂಗಲೆಯಾಗಿತ್ತು.  ತೀವ್ರ ಒತ್ತಡದಲ್ಲಿದ್ದ ಸೋನಿಯಾ ಅಳುಕುತ್ತಲೇ ಮಹಲು ಹೊಕ್ಕರು. ಗಾಂಧಿ ಮನೆತನದ ಸೊಸೆ, ಮೂಲ ಇಟಲಿಯ ಸಮಚಿತ್ತದ ಹೆಣ್ಣುಮಗಳು ಹಲ್ಲಿ, ಬಾವಲಿ, ಹಾವುಗಳಿಂದ ತುಂಬಿದ ಮಹಲನ್ನು ಸ್ವಚ್ಛಗೊಳಿಸಿ ಮತ್ತೆ ವಾಸ ಯೋಗ್ಯವಾಗಿಸಿಕೊಂಡರು. ಅಳಿದುಳಿದ ವಫಾದಾರ್‌ಗಳು ಕೋಠ್ರಿ ಹೊಕ್ಕರು. ಕೆಲವರು ಅಕ್ಷರಶಃ ಕಾವಲಾದರು. ಧ್ವಂಸದಲ್ಲಿ ಹೋದ ಮಹಲಿನ ಮಾನ ಉಳಿಸಿದರು. ರಾಜಕೀಯ ಮತ್ಸರಿಯರ ಮಸಲತ್ತುಗಳ ನಡುವೆಯೂ ಯಶಸ್ಸು ಕಾಲಬುಡಕ್ಕೇ ಬಂದಾಗ ಧಿಕ್ಕರಿಸಿ ಸರದಾರನೊಬ್ಬನಿಗೆ ದೇಶದ ಭವಿಷ್ಯ ಕಟ್ಟುವ ಕೆಲಸ ವಹಿಸಿ ಬೆನ್ನಿಗೆ ನಿಂತರು. ಮನೆಯ ಹಿರಿಯಕ್ಕನಂತೆ ನಿಂತು ಕುಸಿಯಲಿದ್ದ ಮಹಲನ್ನು ಹೆಗಲು ಕೊಟ್ಟು ತಡೆದರು.  ಹಗರಣದ ಆರೋಪ, ಪ್ರತ್ಯಾರೋಪಗಳ ಬೆಂಕಿಮಳೆಗೆ ಮಹಲು ಮತ್ತೆ ತುತ್ತಾಯಿತು.   ದೇಶದ ಒಂದು ಮೂಲೆಯಲ್ಲಿ ಕೋಮು ಗಲಭೆ, ಹಿಂಸೆ. ಪ್ರತಿಹಿಂಸೆ ಎಬ್ಬಿಸಿ ಅದರ ಕಾವನ್ನು ಎಲ್ಲೆಡೆ ಹಬ್ಬಿಸಿದವ