ಜೀನ್ ಬ್ಯಾಪ್ಟಿಸ್ಟ್ ಪೊಕ್ವೆಲಿನ್ ಅಲಿಯಾಸ್ ಮೊಲಿಯರ್ 18ನೇ ಶತಮಾನದ ಹೆಸರಾಂತ ಫ್ರೆಂಚ್ ನಾಟಕಕಾರ. ಮೊಲಿಯರ್ ಎನ್ನುವುದು ಆತನ ರಂಗನಾಮ. ಕಾಮಿಡಿ ನಾಟಕಗಳಿಂದ ಹೆಸರಾದ ಈತ ಬದುಕಿನ ಸಣ್ಣ ಪುಟ್ಟ ಖುಷಿ ಕ್ಷಣಗಳು ಮತ್ತು ಹಾಸ್ಯದ ಪ್ರಸಂಗಗಳನ್ನೇ ಎತ್ತಿಕೊಂಡು ಇತರ ನಾಟಕೀಯ ಅಂಶಗಳೊಂದಿಗೆ ಬದುಕಿನ ಬಹುದೊಡ್ಡ ವಿಷಣ್ಣತೆ. ವಿಷಾದವನ್ನು ನಾಟಕವಾಗಿ ಕಟ್ಟಿಕೊಟ್ಟಿದ್ದಾನೆ. ಆ ಮೂಲಕ ಬದುಕಿನ ಬಗ್ಗೆ ಚಿಂತನೆಗೆ ಹಚ್ಚಿದ್ದಾನೆ. ಪರಿಣಾಮಕಾರಿಯಾದ ಪ್ರಹಸನಗಳಿಂದಲೇ ಮೊಲಿಯರ್ ತುಂಬ ಖ್ಯಾತಿ ಗಳಿಸಿದ. ತಾರ್ತೂಫ್, ಬೂರ್ಜ್ವಾ ಜಂಟಲ್‌ಮನ್ ಮತ್ತಿತರ ನಾಟಕಗಳ ಮೂಲಕ ಅನನ್ಯ ರಂಗಾನುಭವಗಳನ್ನು ಪ್ರೇಕ್ಷಕರಿಗೆ ಕಟ್ಟಿಕೊಟ್ಟ ಮೊಲಿಯರ್, ನಮ್ಮ ನಡುವೆ ಮತ್ತು ಸಮಾಜದಲ್ಲಿ ಅಸಂಖ್ಯ ಪ್ರಹಸನಗಳು ನಡೆದಾಗೆಲ್ಲ ನೆನಪಾಗುತ್ತಾನೆ. ಕಳೆದ ಶನಿವಾರ ಸಂಜೆ, ಕೆ.ಎಚ್. ಕಲಾಸೌಧದಲ್ಲಿ ‘ಸೈಡ್ ವಿಂಗ್’ ತಂಡ ಏರ್ಪಡಿಸಿದ್ದ ‘ಇಲ್ಲ.. ಅಂದರೆ.. ಇದೆ!’ ಎನ್ನುವ ಕಾಮಿಡಿ ನಾಟಕದ ಪ್ರಯೋಗಕ್ಕೆ ಜಿ.ಎನ್. ಮೋಹನ್ ಅವರ ಜೊತೆ ನಾನೂ ಸಾಕ್ಷಿಯಾದೆ. ಮೊಲಿಯೊರ್ ಯಾಕೋ ನೆನಪಾದ. ನಾವು ನಮ್ಮದೇ ಬದುಕಿನ ನಿಜದ ನೆಲೆಗಳ ಹುಡುಕಾಟಕ್ಕೆ ಇಳಿದಾಗ ವಾಸ್ತವಾಂಶಗಳು ಅನಾವರಣಗೊಳ್ಳುತ್ತವೆ. ಮನುಷ್ಯ ಸಂಬಂಧಗಳಲ್ಲಿ ಅಂದರೆ ಗಂಡು–ಹೆಣ್ಣು, ಸಮಾಜದ ಜೊತೆಗಿನ ಮನುಷ್ಯನ ಸಂಬಂಧಗಳು ಅಂದರೆ ಸಾಮಾಜಿಕ ಸಂಬಂಧ ಇದೆಲ್ಲದರ ಜೊತೆ ನಮ್ಮ ಸ್ಪಂದನೆ ಏನು? ಕಂಡುಕ...