ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಮಾರ್ಚ್, 2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಕಲೆ ಮತ್ತು ನೈತಿಕತೆ

ಕಲಾವಿದನೊಬ್ಬನ ಕಲೆಯ ಬಗೆಗಿನ ಅನುರಾಗ, ಶ್ರದ್ಧೆ, ವಿಶ್ವಾಸಾರ್ಹತೆ ಮತ್ತು ಧ್ಯಾನ ಎಲ್ಲವೂ ಬದ್ಧತೆಯಿಂದ ಕೂಡಿರುತ್ತದೆ. ಅವನೊಳಗೇ ಒಂದು ಸ್ವರ್ಗ ಸಮಾನವಾದ ಜಗತ್ತೊಂದು ರೂಪುಗೊಂಡಿರುತ್ತದೆ. ಅದನ್ನು ಬೇಕಿದ್ದರೆ ಕಾವ್ಯದ  ಅಂತಃದೃಷ್ಟಿ, ಅಂತಃಪ್ರಜ್ಞೆ ಅಥವಾ ಅಂತಃ ಸೂಕ್ಷ್ಮತೆ ಅಂತ ಅನ್ನಿ. ಕಾವ್ಯ ಎಂದಾಕ್ಷಣ ಅಕ್ಷರಗಳ ಕಲಾಕೃತಿ ಅಲ್ಲ. ಕಾವ್ಯ ಅಥವಾ ಪೊಯಟ್ರಿ ಅನ್ನೋದು ಎಲ್ಲದರೊಳಗೂ ಇರುವ ಅವ್ಯಕ್ತ ಸೂಕ್ಷ್ಮ. ಅದನ್ನು ಅಭಿವ್ಯಕ್ತಿಸಲು ನಾವು ಕಂಡುಕೊಳ್ಳುವ ಮಾರ್ಗಗಳಲ್ಲಿ ಅಕ್ಷರ, ಶಬ್ದ, ಧ್ವನಿ, ಚಿತ್ರ, ಅಭಿನಯ.. ಎಲ್ಲವೂ ಒಂದು ಮಾಧ್ಯಮ. ಕಲಾವಿದ ಅಥವಾ ಕವಿ ತಾನು ಸೃಜಿಸಹೊರಟ ಕೃತಿಯಲ್ಲಿ ಇದೆಲ್ಲವನ್ನು ಪ್ರಯೋಗಕ್ಕೊಳಪಡಿಸಿ ಅದರ ಸಾರವನ್ನೇ ಅಭಿವ್ಯಕ್ತಿಯಲ್ಲಿ ಎರಕಹೊಯ್ಯುತ್ತಾನೆ. ಹಾಗಾದಾಗ ಆ ಕಲಾಕೃತಿಯಲ್ಲಿ ಧ್ವನಿಸುತ್ತಿರುವುದು ಅವನ ದೃಷ್ಟಿ, ಪ್ರಜ್ಞೆ, ತತ್ವ, ಅಭಿಪ್ರಾಯ ಆಗುತ್ತದೆ. ಇದಕ್ಕೂ ಮಿಗಿಲಾಗಿ ಅದು ಆತನ ಅನುಭಾವ ಪರಪಂಚವೇ ಆಗುತ್ತದೆ. ಪ್ರತಿನಿಧಿಸುವ ತತ್ವ ಅವನದೇ ಆಗಬಹುದು. ಅದಕ್ಕವನು ಬದ್ಧನೂ ಆಗಬಹುದು. ಇಲ್ಲವೇ ಅರಾಜಕತೆಯ ಹಾಗೊಂದು ಭಾವದಲ್ಲಿ ತನಗೂ ತನ್ನ ಕಲಾಕೃತಿಗೂ ಸಂಬಂಧವೇ ಇಲ್ಲ ಎಂದು ವಾದಿಸಬಹುದು. ಅರಾಜಕತೆಯಿಂದ ಕೂಡಿದ ಯಾವುದೂ ಬಹುಕಾಲ ಬಾಳಿ ಬದುಕುವಂಥದ್ದಲ್ಲ ಎನ್ನುವ ಎಚ್ಚರ ಕೂಡ ಮುಖ್ಯ.   ಮತ್ತೆ ಕಲಾವಿದನ ಅಭಿವ್ಯಕ್ತಿಯನ್ನು ಬರಿಯ ಸಾಂಸ್ಕೃತಿಕ ನೆಲೆಯಲ್ಲಿ ಮಾತ್ರ ಕಾಣಬೇಕಿಲ್ಲ. ಅದು ಸಮಾಜೋ–ರಾಜಕೀ

ಇಂಡಿಯಾದ ರಾಜಕೀಯ ಎದುರಿಸಲಿರುವ ಅಪಾಯದ ಮುನ್ಸೂಚನೆ

Theater Olympic 2018 Play: Gunamukha Enacted bu NSD bengaluru Direction: C Basavalingaiah C Basavalingaiah Basu       ಅ ರೆ ಅಲೆಮಾರಿಯ ಮಗನೊಬ್ಬನಿಗೆ ಅಧಿಕಾರ, ದೌಲತ್‌ ಸುಖದ ಕಲ್ಪನೆಯಷ್ಟೇ ಆಗಿರಲಿಲ್ಲ. ಅದು ಒಟ್ಟೊವಿಯನ್‌ ಸಾಮ್ರಾಜ್ಯದ ವೈಭವವನ್ನು ಮೀರಿಸುವಂತೆ ಬೆಳೆದು ನಿಲ್ಲುವ ಕನಸು, ಛಲವೂ ಆಗಿತ್ತು. ಸಾಧಾರಣ ಗ್ಯಾಂಗ್‌ ಕಟ್ಟಿಕೊಂಡು ತನ್ನ ಕಾಲದ ಅರಸು ಮನೆತನಗಳ ಮೇಲೆ ಕಣ್ಣಿಟ್ಟು ಸೈನ್ಯ ಸೇರುವ ಆತ ಅದರ ನಾಯಕನೂ ಆಗುತ್ತಾನೆ. ದೊರೆಯಾಗಿ ರಾಜಕೀಯ ಮಹತ್ವಾಕಾಂಕ್ಷೆ ಈಡೇರಿಸಿಕೊಂಡು ಪರ್ಷಿಯಾ ಸೇರಿದಂತೆ ಜಾರ್ಜಿಯಾ, ರಷ್ಯದ ಹಲವು ಭಾಗಗಳನ್ನು ಆಗಲೇ ಆಕ್ರಮಿಸಿಕೊಳ್ಳುತ್ತಾನೆ. ಅವನು ಧೈರ್ಯಶಾಲಿ ನಾದಿರ್‌ ಷಾ.   ಕೆಲ ಕಾಲ ಹಿಂದೂಸ್ತಾನದ ದೊರೆಯೂ ಆಗಿ ಮೆರೆದಿದ್ದು ಒಂದು ಆಕಸ್ಮಿಕ. ಪರ್ಷಿಯಾ ದೇಶಗಳ ಸಮೇತ ಆಪ್ಘನ್‌, ಲಾಹೋರ್‌ ಗೆಲ್ಲುತ್ತ ದೆಹಲಿಗೂ ಕಾಲಿಟ್ಟಾಗ ಇಲ್ಲಿದ್ದ ಮುಘಲ್‌ ಸೈನ್ಯ ದೈನೇಸಿ ಸ್ಥಿತಿಯಲ್ಲಿತ್ತು. ಸುಲ್ತಾನಗಿರಿಯೂ ಅವಸಾನದಂಚಿನಲ್ಲಿತ್ತು. ಮುಘಲ್‌ರನ್ನು ಮಣಿಸಿ ನಾದಿರ್‌ ಷಾ ದೆಹಲಿಯ ದೊರೆಯಾಗಿಬಿಡುತ್ತಾನೆ. ಮುಘಲ್‌ರನ್ನು ಸೋಲಿಸಬಹುದು ಎನ್ನುವ ಮೊದಲ ಸೂಚನೆಯನ್ನು ಈತ ಜಗತ್ತಿಗೆ ತೋರಿಸಿಕೊಡುತ್ತಾನೆ. ಹೀಗಾಗಿಯೇ ಫ್ರೆಂಚರು ಮತ್ತು ಬ್ರಿಟೀಷರಿಗೆ ಈತ ಹೀರೋ!   ಆನಂತರದಲ್ಲಿ ಸಾಮ್ರಾಜ್ಯಷಾಹಿಯಾಗಿ ಮೆರೆದ ನಾದಿರ್‌ ಧರ್ಮ ಮತ್ತು ರಾಜಕಾರಣ ಬೆಸೆ

ದಿವ್ಯಾನುಭವ ನೀಡಿದ ಉಸಿರಿನಾಟ

Theatre Olympics 2018/Organised by: NSD Bengaluru Centre Play (Nob-verbal): Caesarean Section. Essays on Suicide/Enacted by: ZAR Theatre Polland Direction- Jarosław Fret ಬದುಕು ಸಾವನ್ನೇ ದಿಟ್ಟಿಸುತ್ತಲಿರುವುದಲ್ಲ. ಜೀವ ದೇಹದಿಂದ ಅನಂತದೆಡೆಗೆ ಹಾರುವ ಕ್ಷಣದತನಕ ಒಳಗೇ ಇರುವ ಅದಾವುದೋ ಶಕ್ತಿ ಅಥವಾ ಚೇತನ ಮನಸು, ದೇಹ, ಜೀವ, ಆತ್ಮದ ಜೊತೆ ನಿರಂತರ ಅನುಸಂಧಾನದಲ್ಲಿರುತ್ತದೇನೋ.. ಬದುಕಿನ ಯಾವುದೋ ಹಂತದಲ್ಲಿ ದುರ್ಬಲಗೊಳ್ಳುವ ಮನಸು ಸಾವಿನ ಧ್ಯಾನಕ್ಕೆ , ಆತ್ಮಹತ್ಯೆಯಂಥ ಪ್ರವೃತ್ತಿಗಿಳಿವುದೇ! ಆಸೆ, ಪಡೆವ. ಕಳಕೊಳ್ಳುವ ಹಂಬಲ, ತುಡಿತ ... ಎಲ್ಲದರಲ್ಲೂ ಸೋತು ನಿಂತಾಗ, ಇಷ್ಟು ವಿಶಾಲ ಟೈಂ ಅಂಡ್‌ ಸ್ಪೇಸ್‌ನಲ್ಲಿ ತನ್ನದೇ ಸ್ಪೇಸ್‌ಗಾಗಿ ತಡಕಾಡಿ ನಿರಾಶಗೊಂಡಾಗ ಎಲ್ಲವನ್ನು ಶಾಶ್ವತವಾಗಿ ಮರೆಯಲು ಅಂಥದೊಂದು ಪ್ರವೃತ್ತಿ ಶುರುವಾಗುತ್ತದೆ. ಸೋಲುಗಳನ್ನೋ, ಅವಮಾನಗಳನ್ನೋ, ಹತಾಶಗಳನ್ನೋ, ನೋವುಗಳನ್ನೋ, ಮುಜುಗರಗಳನ್ನೋ... ಅದೇನೇನನ್ನೋ ಕಾರಣಗಳ ಮಾಡಿಕೊಳ್ಳಬಹುದು ಆ ಪ್ರವೃತ್ತಿ ! ಆತ್ಮ ಹತ್ಯೆಯ ನಿರ್ಣಾಯಕ ಕ್ಷಣದಲ್ಲಿ ಅದಾವುದೋ ನಮ್ಮೊಳಗಿನ ಚೇತನ ಮತ್ತೆ ರಚ್ಚೆ ಹಿಡಿದು ಹಿಂದಕ್ಕೆಳೆಯುತ್ತದೆ. ತನಗೆ ಈ ಕ್ಷಣ ನೀನು ಬೇಕೇ ಬೇಕೆನ್ನುವ ಹಟಕ್ಕೆ ಬಿದ್ದ ಪುಟ್ಟ ಕಂದ, ಅಮ್ಮನ ಸೆರಗು ಹಿಡಿದು ನಿಲ್ಲುವ ಹಾಗೆ. ಸ್ವಲ್ಪ ನಿಂತು ಬಿಡೋ, ಕತ್ತಲಾವರಿಸುತ್ತಿದೆ, ಮಳೆ ಜೋರು, ಗಾಳಿಯೂ ಬಿರು ಬೀಸುತ್ತಲಿದೆ,