ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಜನವರಿ 4, 2018 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ತಲಾಖ್ ತಲಾಖ್ ತಲಾಖ್

ಒಟ್ಟಾಗಿ ಸಂಬಂಧವಾಗುತ್ತೇವೆ. ಸಂಬಂಧದಿಂದ ಒಟ್ಟಾಗುತ್ತೇವೆ. ಎರಡೂ ಸಾಧ್ಯವಿದೆ. ಬಂಧ ಗಟ್ಟಿಗೊಳ್ಳುವುದಕ್ಕೆ ಬೈಡಿಫಾಲ್ಟ್‌ ಆದ ಏನೂ ಇರುವುದಿಲ್ಲ. ಮನೆ ಕಟ್ಟಿಕೊಳ್ಳುವಂತೆ ಮನಸೂ ಕಟ್ಟಿಕೊಳ್ಳುವಂಥದು. ಒಂದು ತಂತು ತಂತಾನೇ ಎಲ್ಲ ನೋಡಿಕೊಳ್ಳಲು ಸಾಧ್ಯವಿದ್ದರೆ ಪ್ರಜ್ಞಾಪೂರ್ವಕವಾದ ಪ್ರಯತ್ನಗಳ ಅಗತ್ಯವಿರುತ್ತಿರಲಿಲ್ಲ. ಯಾರೂ ಯಾರ ಬದುಕಿಗೆ ಸುಮ್ಮನೇ ಸೇರುವುದಿಲ್ಲ.  ಮನುಷ್ಯರ ನಡುವೆ ಫಲಾಪೇಕ್ಷೆಗಳ ಹಂಗಿಲ್ಲದ ಅಕಾರಣ ಸಂಬಂಧಗಳೂ ಇವೆ. ಆದರೆ ಮದುವೆ ಎನ್ನುವ ಖಾಸಗಿ ಸಂಬಂಧದಲ್ಲಿ ನಿರ್ದಿಷ್ಟ ನಿರೀಕ್ಷೆಗಳಿರುವುದರಿಂದ ಅದೊಂದು ಏರ್ಪಾಟು. ಇದನ್ನೇ ಕ್ರಮಬದ್ಧ ಶಿಸ್ತಿಗೊಳಪಡಿಸುವ ಜವಾಬುದಾರಿಯನ್ನು ಕುಲ, ಜಾತಿ, ಧರ್ಮಗಳು ಹೊತ್ತುಕೊಂಡು ಸಾಂಸ್ಥಿಕ ಸ್ವರೂಪದಲ್ಲಿ ನಿಯಂತ್ರಿಸುತ್ತಿವೆ. ನಾಗರಿಕತೆ ಕಟ್ಟಿಕೊಳ್ಳುವ ಪ್ರಕ್ರಿಯೆಯಲ್ಲಿ ಹುಟ್ಟಿಕೊಂಡ ಇಂಥ ವ್ಯವಸ್ಥೆಗಳು ಕಾಲಾಂತರದಲ್ಲೂ ಮುಂದುವರಿದಿವೆ.   ಬುಡಕಟ್ಟುಗಳಲ್ಲಿ ಹಂಚಿಹೋಗಿದ್ದ ಅರೇಬಿಯನ್ನರನ್ನು ಒಗ್ಗೂಡಿಸಿ ನಿರಾಕಾರವಾದ ಏಕದೇವೋಪಾಸನೆ ವ್ಯಾಪ್ತಿಗೆ ತಂದಿದ್ದು ಪ್ರವಾದಿ ಮುಹಮ್ಮದ್‌ ನೇತೃತ್ವದ ಇಸ್ಲಾಂ. ಅದು ಅಪರೂಪದ ಅಸ್ಮಿತೆಯಾಗಿ ಇಂಡಿಯಾದಲ್ಲೂ ಹಬ್ಬಿದೆ. ಏಕದೇವೋಪಾಸನೆಗೆ ಪೂರಕ ಐದು ಮುಖ್ಯ ನೇಮಗಳನ್ನು ಇಸ್ಲಾಂ ರೂಪಿಸಿಕೊಂಡಿತು. ಕಲ್ಮಾ, ರೋಜಾ, ನಮಾಜ್‌, ಜಕಾತ್‌ ಮತ್ತು ಹಜ್‌. ಇವಕ್ಕೆಲ್ಲ ಕರಾರುವಾಕ್ಕಾದ ನೀತಿ ಸಂಹಿತೆಗಳನ್ನು ಅದು ರೂಪಿಸಿತು. ಹಾಗೆಯೇ ಸಾಮಾಜಿಕ ಬದುಕಿಗ